ಕೊರೊನಾ ವೈರಸ್ ಲಾಕ್ ಡೌನ್ ಹಿನ್ನಲೆ : ಸುಳ್ಯ ಶ್ರೀ ಚೆನ್ನಕೇಶವ ದೇವಸ್ಥಾನದ ಬ್ರಹ್ಮಕಲಶೋತ್ಸವ ಮುಂದೂಡಿಕೆ

Advt_Headding_Middle
Advt_Headding_Middle

ಇತಿಹಾಸ ಪ್ರಸಿದ್ಧ ಸುಳ್ಯ ಶ್ರೀ ಚೆನ್ನಕೇಶವ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವವು ಮೇ 13 ರಿಂದ ಮೇ 18 ರವರೆಗೆ ನಡೆಯಬೇಕಾಗಿದ್ದು ಕೊರೊನಾ ವೈರಸ್ ಲಾಕ್ ಡೌನ್ ನಿಂದ ಮುಂದೂಡಲಾಗಿದೆ.
ದೇವಸ್ಥಾನದಲ್ಲಿ ಅದ್ದೂರಿಯಾಗಿ ನಡೆಯಬೇಕಾಗಿದ್ದ ಬ್ರಹ್ಮಕಲಶೋತ್ಸವಕ್ಕೆ ಪೂರ್ವತಯಾರಿಯಾಗಿ ದೇವಸ್ಥಾನದಲ್ಲಿ ಪೂರ್ವಭಾವಿ ಸಭೆಗಳು ನಡೆದಿದ್ದವು.
ಸಭೆಯಲ್ಲಿ ವಿವಿಧ ಸಮಿತಿಗಳನ್ನು ಮಾಡಿ ಸಮಿತಿಯವರಿಗೆ ಜವಾಬ್ದಾರಿಯನ್ನು ಕೂಡ ಹಂಚಲಾಗಿತ್ತು.
ಆದರೆ ಸರಕಾರವು ಕೊರೊನಾ ವೈರಸನ್ನು ತಡೆಗಟ್ಟಲು ಕೈಗೊಂಡ ನಿಯಮದಿಂದ ಬ್ರಹ್ಮಕಲಶೋತ್ಸವವನ್ನು ಮುಂದುವರೆಸಲಾಗಿದೆ. ಭಕ್ತಾಭಿಮಾನಿಗಳು ಸಹಕರಿಸಬೇಕೆಂದು ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಹಾಗೂ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಡಾ.ಕೆ.ವಿ.ಚಿದಾನಂದರವರು ಮತ್ತು ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ ಡಾ.ಹರಪ್ರಸಾದ್ ತುದಿಯಡ್ಕ ತಿಳಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.