ಐವರ್ನಾಡು ಗ್ರಾಮ ಪಂಚಾಯತ್ ಸಾಮಾನ್ಯ ಸಭೆ

Advt_Headding_Middle
Advt_Headding_Middle

ಐವರ್ನಾಡು ಗ್ರಾಮ ಪಂಚಾಯತ್ ಆಡಳಿತ ಮಂಡಳಿಯ ಸಾಮಾನ್ಯ ಸಭೆಯ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಬಾಲಕೃಷ್ಣ ಕೀಲಾಡಿರವರ ಅಧ್ಯಕ್ಷತೆಯಲ್ಲಿ ಮೇ.14 ರಂದು ಮಾದರಿ ಗ್ರಾಮ ವಿಕಾಸ ಸಭಾ ಭವನದಲ್ಲಿ ಜರುಗಿತು. ಸಾಮಾಜಿಕ ಅಂತರ ಕಾಯ್ದುಕೊಂಡು ನಡೆದ ಈ ಆಡಳಿತ ಮಂಡಳಿ ಸಭೆಯಲ್ಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕೊರೋನಾ ಸೋಂಕು ತಡೆಗಟ್ಟಲು ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಹಾಗೂ ಬೇರೆ ಬೇರೆ ಜಿಲ್ಲೆ ರಾಜ್ಯಗಳಿಂದ ಬರುವವರ ಕ್ವಾರೆಂಟೇನ್ ಬಗ್ಗೆ
ಸೂಕ್ತ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ಮತ್ತು ಗ್ರಾಮ ಪಂಚಾಯತಿಯಲ್ಲಿ ಮಲೇರಿಯ ಡೆಂಗ್ಯೂ ತಡೆಗೆ ಜನಜಾಗೃತಿ ಅಭಿಯಾನ ನಡೆಸುವ ಕುರಿತು ಮತ್ತು ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯ ಪರಿಣಾಮಕಾರಿ ಅನುಷ್ಟಾನದ ಬಗ್ಗೆ ಹಾಗೂ 15ನೇ ಹಣಕಾಸು ಇ- ಗ್ರಾಮಸ್ವರಾಜ್ ಕಾರ್ಯಕ್ರಮದ ಕುರಿತು ಪರಿಣಾಮಕಾರಿಯಾಗಿ ಕಾರ್ಯಕ್ರಮಗಳನ್ನು ಅಳವಡಿಸಿಕೊಂಡು ಅನುಷ್ಠಾನಗೊಳಿಸುವ ಕುರಿತಾಗಿ ಚರ್ಚಿಸಲಾಯಿತು ಮತ್ತು ರಚನಾತ್ಮಕ ಕ್ರಮಗಳನ್ನು ತೆಗೆದುಕೊಳ್ಳಲು ನಿರ್ಣಯಿಸಲಾಯಿತು.ಅಲ್ಲದೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಪ್ರತಿಯೊಬ್ಬರು ಮಾಸ್ಕ್ ಧರಿಸಲು ,ಸಾಮಾಜಿಕ ಅಂತರ ಕಾಯ್ದುಕೊಳ್ಳಲು , ಸಾರ್ವಜನಿಕ ಅಂತರ ಕಾಯ್ದುಕೊಳ್ಳುವರೇ ವಾಯ್ಸಕಾಲ್ ಮೆಸೇಜ್ ಮೂಲಕ ಜಾಗೃತಿ ಮೂಡಿಸಲು ತಾಂತ್ರಿಕ ವ್ಯವಸ್ತೆ ರೂಪಿಸಲು ತೀರ್ಮಾನಿಸಲಾಯಿತು.

ಹಾಗು ಪ್ರೊಜೆಕ್ಟರ್ ಡಿಸ್ಪ್ಲೆ ಮೂಲಕ ಕೊರೋನೊ ಸೋಂಕು ,ನರೇಗಾ ಕಾರ್ಯಕ್ರಮದ ಮಾಹಿತಿ ನೀಡಲಾಯಿತು.ಗ್ರಾಮ ಪಂಚಾಯತ್ ಆಡಳಿತ ಮಂಡಳಿ ಸದಸ್ಯರು ,ಆಶಾಕಾರ್ಯಕರ್ತೆಯರು,ಎ.ಎನ್.ಎಂ.,ಪಿ.ಡಿ.ಒ ಮತ್ತು ಗ್ರಾ.ಪಂ.ಸಿಬ್ಬಂದಿಗಳು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.