ಜಾಲ್ಸೂರು ಗ್ರಾ.ಪಂ. ವ್ಯಾಪ್ತಿಯಲ್ಲಿ ಇಂದಿನಿಂದ ಬೆಳಿಗ್ಗೆ 7ರಿಂದ ಸಂಜೆ 7ರವರೆಗೆ ಅಂಗಡಿಗಳ ಓಪನ್

Advt_Headding_Middle
Advt_Headding_Middle

 

ಕಡ್ಡಾಯವಾಗಿ ಮುಖಕ್ಕೆ ಮಾಸ್ಕ್ ಹಾಕಿ ಬರುವಂತೆ ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಸೂಚನೆ

ಜಾಲ್ಸೂರು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಇಂದಿನಿಂದ (ಮೇ.22) ಪ್ರತೀ ದಿನ ಬೆಳಿಗ್ಗೆ 7 ರಿಂದ ಸಂಜೆ 7 ಗಂಟೆಯವರೆಗೆ ಎಲ್ಲಾ ಅಂಗಡಿ-ಮುಂಗಟ್ಟುಗಳನ್ನು ಓಪನ್ ಮಾಡುವಂತೆ ಗ್ರಾಮ ಪಂಚಾಯತಿ ವತಿಯಿಂದ ಸೂಚಿಸಲಾಗಿದೆ.
ಕೋವಿಡ್-19 ಕೊರೊನಾ ವೈರಸ್ ತಡೆಗಟ್ಟುವ ನಿಟ್ಟಿನಲ್ಲಿ ಕಳೆದ ಮೇ‌.13ರಿಂದ ಮೇ.21ರವರೆಗೆ ಪ್ರತೀ ದಿನ ಬೆಳಿಗ್ಗೆ 7ರಿಂದ ಅಪರಾಹ್ನ 2 ಗಂಟೆಯವರೆಗೆ ಅಂಗಡಿಗಳನ್ನು ಓಪನ್ ಮಾಡುವಂತೆ ಗ್ರಾಮ ಪಂಚಾಯತಿಯ ಕೋವಿಡ್ ಕಾರ್ಯಪಡೆ ಹಾಗೂ ವರ್ತಕರ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿತ್ತು.
ಆದರೆ ಇದೀಗ ಮೇ.21ರಂದು ಅಪರಾಹ್ನ ಗ್ರಾಮ ಪಂಚಾಯತಿಯ ಕೋವಿಡ್-19 ಕಾರ್ಯಪಡೆಯ ಪದಾಧಿಕಾರಿಗಳ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ.
ಆದರೆ ಅಂಗಡಿಗಳಿಗೆ ಭೇಟಿ ಕೊಡುವ ಗ್ರಾಹಕರು ಕಡ್ಡಾಯವಾಗಿ ಮುಖಕ್ಕೆ ಮಾಸ್ಕ್ ಧರಿಸಿಕೊಂಡು ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಎಂದು ಗ್ರಾ.ಪಂ. ವತಿಯಿಂದ ಎಲ್ಲಾ ವರ್ತಕರಿಗೆ ಸೂಚಿಸಲಾಗಿದೆ. ಈ ಬಗ್ಗೆ ಎಲ್ಲಾ ಅಂಗಡಿಗಳ ಮಾಲಕರುಗಳಿಗೆ ನೋಟಿಸ್ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.