Breaking News

ಗ್ರಾಮದ ಪ್ರತಿ ಮನೆಯ ಸದಸ್ಯರಿಗೆ ಮಾಸ್ಕ್ ವಿತರಣೆ

Advt_Headding_Middle
Advt_Headding_Middle

 

ಬಳ್ಪ ಗ್ರಾಮದಲ್ಲಿ ನಡೆಯುತ್ತಿದೆ ಹೀಗೊಂದು ಮಾದರಿ ಕಾರ್ಯ

ತ್ರಿಶೂಲಿನೀ ದೇಗುಲದ ಉತ್ಸವ ಸಮಿತಿಯಿಂದ ವ್ಯವಸ್ಥೆ

ಕೊರೊನಾ ಮಹಾಮಾರಿಯನ್ನು ತಡೆಗಟ್ಟುವಲ್ಲಿ ಮಾಸ್ಕ್ ಕಡ್ಡಾಯವಾಗಿ ಬಳಸುವಂತೆ ಸರಕಾರ ಆದೇಶ ಮಾಡಿದ ಹಿನ್ನೆಲೆಯಲ್ಲಿ ಬಳ್ಪ ಶ್ರೀ ತ್ರಿಶೂಲಿನೀ ದುರ್ಗಾಪರಮೇಶ್ವರಿ ಉತ್ಸವ ಸಮಿತಿ ವತಿಯಿಂದ ಬಳ್ಪ ಗ್ರಾಮದ ಪ್ರತೀ ಮನೆಯ ಎಲ್ಲಾ ಸದಸ್ಯರಿಗೆ ಮಾಸ್ಕ್ ವಿತರಣೆಯು ಇಂದು ನಡೆಯಿತು.

ಬಳ್ಪ ಗ್ರಾಮ ಪಂಚಾಯತ್ ಅಧ್ಯಕ್ಷ ಪ್ರಕಾಶ್ ಮುಡ್ನೂರು ಕಾರ್ಯಕ್ರಮ ಉದ್ಘಾಟಿಸಿದರು. ಈಗಾಗಲೇ ದಾನಿಗಳ ಮೂಲಕ ಸಂಗ್ರಹಿಸಿದ ಅಂದಾಜು ರೂ. 9೦೦೦೦ ವೆಚ್ಚದಲ್ಲಿ ಒಟ್ಟು 5೦೦೦ ಮಾಸ್ಕ್‌ಗಳನ್ನು ವಿತರಿಸಲಾಗಿದೆ. ಉತ್ಸವ ಸಮಿತಿ ಅಧ್ಯಕ್ಷ ಸದಾನಂದ ರೈ ಅರ್ಗುಡಿ, ಗೌರವಾಧ್ಯಕ್ಷ ಭಾಸ್ಕರ ಪಂಡಿ, ದೇವಳದ ಆಡಳಿತ ಮೊಕ್ತೇಸರರಾದ ಎಂ.ವಿ. ಶ್ರೀವತ್ಸ, ಉತ್ಸವ ಸಮಿತಿ ಪದಾಧಿಕಾರಿಗಳು, ಬೈಲುವಾರು ಸಮಿತಿ ಸಂಚಾಲಕರು, ಸದಸ್ಯರು, ಊರವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಸಮಿತಿ ಸದಸ್ಯರು ಮಾಸ್ಕ್ ನ್ನು ಮನೆ ಮನೆಗೆ ತಲುಪಿಸುವಲ್ಲಿ ಸಹಕಾರ ನೀಡಿದರು. ಸುಮಾರು 1 ಸಾವಿರಕ್ಕಿಂತಲೂ ಹೆಚ್ಚು ಮನೆಗಳ‌ ಸದಸ್ಯರಿಗೆ ಮಾಸ್ಕ್ ವಿತರಿಸಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಲಾಗಿದೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.