HomePage_Banner
HomePage_Banner
HomePage_Banner
HomePage_Banner

ಸಾಮಾಜಿಕ ಅಂತರ ಕಾಯ್ದುಕೊಳ್ಳದೇ ಮಿನಿ ವಿಧಾನ ಸೌಧಕ್ಕೆ ಗುದ್ದಲಿ ಪೂಜೆ

 

ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ ಜನಪ್ರತಿನಿಧಿಗಳ ನಡೆ

ಕಡಬ ತಾಲೂಕು ಕೇಂದ್ರದಲ್ಲಿ ಮಿನಿ ವಿಧಾನಸೌಧ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ ಆಗಿ ಒಂದು ವರ್ಷದ ಬಳಿಕ ಇದೀಗ ಗುದ್ದಲಿ ಪೂಜೆಯ ಮೂಲಕ ಕಾಮಗಾರಿಗೆ ಮತ್ತೆ ಜೀವ ಬಂದಿದೆ.

ಆದರೆ ಈ ಕಾರ್ಯಕ್ರಮದ ವೇಳೆ ಸಾಮಾಜಿಕ ಅಂತರ ಕಾಯ್ದುಕೊಳ್ಳಲಾಗಿಲ್ಲ ಎಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ಮಾಧ್ಯಮಗಳಲ್ಲಿ ವರದಿಯಾಗುತ್ತಿದೆ.

ಜನಸಾಮಾನ್ಯರಿಗೆ ಅನುಕೂಲವಾಗುವಂತೆ ಒಂದೇ ಸೂರಿನಡಿಯಲ್ಲಿ ವಿವಿಧ ಇಲಾಖೆಗಳ ಕಚೇರಿಗಳು ತೆರೆಯಬೇಕು ಎನ್ನುವ ಸರ್ಕಾರದ ಆಶಯದಂತೆ ಕಡಬದಲ್ಲಿ ಮಿನಿ ವಿಧಾನಸೌಧ ನಿರ್ಮಾಣಕ್ಕೆ 10 ಕೋಟಿ ರೂ. ಅನುದಾನ ಬಿಡುಗಡೆಯಾಗಿದ್ದು, ಕಡಬ ತಹಶೀಲ್ದಾರ್ ಕಚೇರಿ ಬಳಿ ಸೋಮವಾರದಂದು ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕ ಎಸ್.ಅಂಗಾರ ಗುದ್ದಲಿ ಪೂಜೆ ನೆರವೇರಿಸಿ ಕಾಮಗಾರಿಗೆ ಚಾಲನೆ ನೀಡಿದರು.

ಅರಣ್ಯ ಇಲಾಖೆಯ ಕೆಲವು ಅಡೆತಡೆಗಳಿಂದಾಗಿ ಕೆಲವು ಕಾಮಗಾರಿ ಸ್ಥಗಿತಗೊಂಡಿವೆ. ಕೂಡಲೇ ಅವುಗಳನ್ನು ನಿವಾರಿಸಿ ಕಾಮಗಾರಿ ಆರಂಭಿಸಲಾಗುವುದು ಎಂದು ಶಾಸಕರು ಈ ಸಂದರ್ಭದಲ್ಲಿ ಹೇಳಿದರು.

ಕಡಬ ತಹಶೀಲ್ದಾರ್ ಕಚೇರಿ ಬಳಿ ಸರ್ವೆ ನಂಬರ್​ 130/1ಎಪಿ2ರಲ್ಲಿ 1.60 ಎಕರೆ ಜಮೀನು ಕಾದಿರಿಸಲಾಗಿದ್ದು, ಕಟ್ಟಡ ನಿರ್ಮಾಣದ ಜವಾಬ್ದಾರಿಯನ್ನು ಕರ್ನಾಟಕ ಗೃಹ ಮಂಡಳಿಗೆ ವಹಿಸಲಾಗಿದೆ. ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ತಾಲೂಕು ಕೇಂದ್ರ ಉದ್ಘಾಟನೆಯಾಗಿದ್ದು, ಈ ವೇಳೆ ಮಿನಿ ವಿಧಾನಸೌಧಕ್ಕೆ ಅಂದಿನ ಕಂದಾಯ ಸಚಿವರಾಗಿದ್ದ ವಿ.ಆರ್.ದೇಶಪಾಂಡೆ ಶಂಕುಸ್ಥಾಪನೆ ನೆರವೇರಿಸಿದ್ದರು. ಇದೀಗ ಮತ್ತೆ ಎರಡನೇ ಬಾರಿ ಕಾಮಗಾರಿಗೆ ಚಾಲನೆ ದೊರೆತಿದೆ. ಈ ವೇಳೆ ಪಕ್ಷದ ಪ್ರಮುಖ ಮುಖಂಡರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.