HomePage_Banner
HomePage_Banner
HomePage_Banner
HomePage_Banner

ರಾಜ್ಯದಲ್ಲಿ ಇಂದು 299 ಮಂದಿಗೆ ಕೊರೋನಾ

 

ದಕ್ಷಿಣ ಕನ್ನಡದಲ್ಲಿ 14 ಕೊರೋನಾ ಪಾಸಿಟಿವ್

ಕರ್ನಾಟಕ ರಾಜ್ಯದಲ್ಲಿ ಇಂದು 299 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಒಂದೇ ದಿನದಲ್ಲಿ ದಾಖಲಾದ ಅತಿ ಹೆಚ್ಚಿನ ಸಂಖ್ಯೆ ಇದಾಗಿದೆ. ಇವುಗಳಲ್ಲಿ 255 ಮಂದಿ ಅಂತಾರಾಜ್ಯ ದಿಂದ ಬಂದವರು. ರಾಜ್ಯದಲ್ಲಿ ಒಟ್ಟು ಪ್ರಕರಣಗಳ ಸಂಖ್ಯೆ 3221ಕ್ಕೇರಿದೆ. ಮೃತಪಟ್ಟವರ ಸಂಖ್ಯೆ 51ಕ್ಕೆ ಏರಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು 14 ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ಒಟ್ಟು ಪ್ರಕರಣಗಳ ಸಂಖ್ಯೆ 133ಕ್ಕೆ ಏರಿಕೆಯಾಗಿದೆ. ಹೊಸ ಪ್ರಕರಣಗಳಲ್ಲಿ ಇಬ್ಬರು ವಿದೇಶದಿಂದ ಬಂದವರಾಗಿದ್ದರೆ, ಮೂವರಿಗೆ ಸ್ಥಳೀಯ ಸಂಪರ್ಕದಿಂದ ಸೋಂಕು ತಗುಲಿದೆ. ಉಳಿದವರು ಮಹಾರಾಷ್ಟ್ರದಿಂದ ಆಗಮಿಸಿದವರು.

ಉಡುಪಿ ಜಿಲ್ಲೆಯಲ್ಲಿ ಇಂದು 10 ಹೊಸ ಪ್ರಕರಣ ಪತ್ತೆಯಾಗಿದೆ. ಎಲ್ಲರೂ ಮಹಾರಾಷ್ಟ್ರದಿಂದ ಬಂದವರು. ಜಿಲ್ಲೆಯಲ್ಲಿ ಒಟ್ಟು ಪ್ರಕರಣಗಳ ಸಂಖ್ಯೆ 187ಕ್ಕೆ ಏರಿದೆ.

ಕಾಸರಗೋಡು ಜಿಲ್ಲೆಯಲ್ಲಿ ಇಂದು 10 ಪ್ರಕರಣ ವರದಿಯಾಗಿದೆ. ಕೇರಳ ರಾಜ್ಯದಲ್ಲಿ61 ಮಂದಿಗೆ ಪಾಸಿಟಿವ್ ದೃಢಪಟ್ಟಿದೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.