HomePage_Banner
HomePage_Banner
HomePage_Banner
HomePage_Banner

ಐವರ್ನಾಡು ಗ್ರಾಮ ಪಂಚಾಯತ್ ವತಿಯಿಂದ ವಿಶ್ವಪರಿಸರ ದಿನಾಚರಣೆ

 

ಐವರ್ನಾಡು ಗ್ರಾಮ ಪಂಚಾಯತ್ ವತಿಯಿಂದ ಐವರ್ನಾಡು ಗ್ರಾಮ ಪಂಚಾಯತ್ ಗ್ರಾಮ ವಿಕಾಸ ಸಭಾಭವನದ ಆವರಣದಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಜೂ.,5 ರಂದು ಆಚರಿಸಲಾಯಿತು.

ಐವರ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರು ಹಾಗೂ ಬೆಳ್ಳಾರೆ ಕ್ಷೇತ್ರದ ಜಿಲ್ಲಾ ಪಂಚಾಯತ್ ಸದಸ್ಯರಾದ ಎಸ್.ಎನ್.ಮನ್ಮಥರ ಅಧ್ಯಕ್ಷತೆಯಲ್ಲಿ ಐವರ್ನಾಡು ಗ್ರಾಮ ಪಂಚಾಯತ್ ಗ್ರಾಮ ವಿಕಾಸ ಸಭಾಭವನದ ಎದುರು ಗಿಡ ನೆಡಲಾಯಿತು.

ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಬಾಲಕೃಷ್ಣ ಕೀಲಾಡಿ, ಸದಸ್ಯರಾದ ಶಾಂತರಾಮ ಕಣಿಲೆಗುಂಡಿ, ಐವರ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಆಶಾ ಕಾರ್ಯಕರ್ತರು,ಅಂಗನವಾಡಿ ಕಾರ್ಯಕರ್ತೆಯರು, ಕಿರಿಯ ಆರೋಗ್ಯ ಸಹಾಯಕಿ ಹಾಗೂ ಗ್ರಾಮ ಪಂಚಾಯತ್ ಸಿಬ್ಬಂದಿಗಳು ಭಾಗವಹಿಸಿದ್ದರು. ಈ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಪಂಚಾಯತ್ ಅಭಿವೃದ್ದಿ ಅಧಿಕಾರಿ ಯು.ಡಿ.ಶೇಖರ್ ರವರು ಪರಿಸರದ ಪ್ರಾಮುಖ್ಯತೆ ಮತ್ತು ಪರಿಸರ ನಾಶದಿಂದಾಗುವ ಪರಿಣಾಮಗಳ ಬಗ್ಗೆ ಮಾಹಿತಿ ನೀಡಿದರು .
ಗ್ರಾಮ ಪಂಚಾಯತ್ ಅಭಿವೃದ್ದಿ ಅಧಿಕಾರಿ ಸ್ವಾಗತಿಸಿ, ವಂದಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.