HomePage_Banner
HomePage_Banner
HomePage_Banner
HomePage_Banner

ವಿನೋಬಾನಗರ: ವಿವೇಕಾನಂದ ವಿದ್ಯಾಸಂಸ್ಥೆಯಲ್ಲಿ ಪೋಷಕರ ಸಭೆ

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಮೂಲಕ ಕೊರೊನಾ ಜಾಗೃತಿ

 
ಜಾಲ್ಸೂರು ಗ್ರಾಮದ ವಿನೋಬಾನಗರದ ವಿವೇಕಾನಂದ ವಿದ್ಯಾಸಂಸ್ಥೆಯಲ್ಲಿ ಪೋಷಕರ ಸಭೆಯು ಜೂ.೬ರಂದು ನಡೆಯಿತು.
ಕೋವಿಡ್-೧೯ ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಈ ವರ್ಷದ ಶಾಲಾ ಶೈಕ್ಷಣಿಕ ಆರಂಭ ಮಾಡುವ ಸಲುವಾಗಿ ವಿದ್ಯಾರ್ಥಿಗಳ ಪೋಷಕರ ಸಭೆ ಜರುಗಿತು. ಸಭೆಯಲ್ಲಿ ಭಾಗವಹಿಸಿದ್ದ ಸುಮಾರು ನೂರ ಎಪ್ಪತ್ತಕ್ಕೂ ಅಧಿಕ ಮಂದಿ ಪೋಷಕರು ತಮ್ಮ ಮಕ್ಕಳ ಹಿತದೃಷ್ಟಿಯಿಂದ ಕೊರೊನಾ ಮುಕ್ತವಾಗಿ ಗ್ರೀನ್ ಜೋನ್ ಬಂದ ಬಳಿಕವೇ ಶಾಲಾ ಪುನರಾರಂಭ ಮಾಡುವಂತೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಶಾಲಾ ಸಂಚಾಲಕ ಕೆ. ಸುಧಾಕರ ಕಾಮತ್, ವಿದ್ಯಾಸಂಸ್ಥೆಯ ಗೌರವ ಸಲಹೆಗಾರ ನ. ಸೀತಾರಾಮ, ವಿದ್ಯಾಸಂಸ್ಥೆಯ ಆಡಳಿತ ಮಂಡಳಿ ಅಧ್ಯಕ್ಷ ಶ್ಯಾಂಪ್ರಸಾದ್ ಅಡ್ಡಂತಡ್ಕ, ಪ್ರೌಢಶಾಲಾ ಮುಖ್ಯೋಪಾಧ್ಯಾಯ ಗೋಪಾಲರಾವ್, ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯಿನಿ ಪಾವನ, ಪ್ರಾಥಮಿಕ ಶಾಲಾ ಎಸ್.ಡಿ.ಎಂ.ಸಿ. ಅಧ್ಯಕ್ಷ ಡಾ. ಗೋಪಾಲಕೃಷ್ಣ ಭಟ್ ಕಾಟೂರು, ಶಾಲಾ ಆಡಳಿತ ಮಂಡಳಿಯ ಪದಾಧಿಕಾರಿಗಳು, ವಿದ್ಯಾರ್ಥಿಗಳ ಪೋಷಕರು, ಶಾಲಾ ಸಹಶಿಕ್ಷಕವೃಂದದವರು ಉಪಸ್ಥಿತರಿದ್ದರು.
ಸಭೆಯಲ್ಲಿ ಭಾಗವಹಿಸಿದ್ದ ಎಲ್ಲರೂ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಮೂಲಕ ಕೊರೊನಾ ಜಾಗೃತಿ ಮೂಡಿಸಿದರು. ವಿದ್ಯಾಸಂಸ್ಥೆಯ ವತಿಯಿಂದ ಸ್ಯಾನಿಟೈಸರ್ ವ್ಯವಸ್ಥೆ ಮಾಡಲಾಗಿತ್ತು.
ಜಾಲ್ಸೂರು ಗ್ರಾಮದ ವಿನೋಬಾನಗರದ ವಿವೇಕಾನಂದ ವಿದ್ಯಾಸಂಸ್ಥೆಯಲ್ಲಿ ಪೋಷಕರ ಸಭೆಯು ಜೂ.6ರಂದು ನಡೆಯಿತು.
ಕೋವಿಡ್-19 ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಈ ವರ್ಷದ ಶಾಲಾ ಶೈಕ್ಷಣಿಕ ಆರಂಭ ಮಾಡುವ ಸಲುವಾಗಿ ವಿದ್ಯಾರ್ಥಿಗಳ ಪೋಷಕರ ಸಭೆ ಜರುಗಿತು. ಸಭೆಯಲ್ಲಿ ಭಾಗವಹಿಸಿದ್ದ ಸುಮಾರು ನೂರ ಎಪ್ಪತ್ತಕ್ಕೂ ಅಧಿಕ ಮಂದಿ ಪೋಷಕರು ತಮ್ಮ ಮಕ್ಕಳ ಹಿತದೃಷ್ಟಿಯಿಂದ ಕೊರೊನಾ ಮುಕ್ತವಾಗಿ ಗ್ರೀನ್ ಜೋನ್ ಬಂದ ಬಳಿಕವೇ ಶಾಲಾ ಪುನರಾರಂಭ ಮಾಡುವಂತೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಶಾಲಾ ಸಂಚಾಲಕ ಕೆ. ಸುಧಾಕರ ಕಾಮತ್, ವಿದ್ಯಾಸಂಸ್ಥೆಯ ಸಲಹಾ ಮಂಡಳಿ ಸದಸ್ಯ ನ. ಸೀತಾರಾಮ, ಪ್ರೌಢಶಾಲಾ ಮುಖ್ಯೋಪಾಧ್ಯಾಯ ಗೋಪಾಲರಾವ್, ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯಿನಿ ಪಾವನ, ಪ್ರಾಥಮಿಕ ಶಾಲಾ ಎಸ್.ಡಿ.ಎಂ.ಸಿ. ಅಧ್ಯಕ್ಷ ಡಾ. ಗೋಪಾಲಕೃಷ್ಣ ಭಟ್ ಕಾಟೂರು, ಶಾಲಾ ಆಡಳಿತ ಮಂಡಳಿಯ ಪದಾಧಿಕಾರಿಗಳು, ವಿದ್ಯಾರ್ಥಿಗಳ ಪೋಷಕರು, ಶಾಲಾ ಸಹಶಿಕ್ಷಕವೃಂದದವರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.