ಮಳೆಗಾಲ ಪ್ರಾರಂಭ ಹಿನ್ನೆಲೆ ಕೊಡಗು ಜಿಲ್ಲೆಯಾದ್ಯಂತ ಭಾರೀ ವಾಹನ ಸಂಚಾರ ನಿಷೇಧ ಜೂನ್ 11ರಿಂದ ಆಗಸ್ಟ್ 10ರವರೆಗೆ ಘನ ವಾಹನ ಸಂಚಾರ ನಿಷೇಧಕ್ಕೆ ಜಿಲ್ಲಾಧಿಕಾರಿ ಆದೇಶ ಸಂಪಾಜೆ-ಮಡಿಕೇರಿ ರಸ್ತೆಯಲ್ಲಿ ಭಾರೀ ಗಾತ್ರದ ವಾಹನ ಸಂಚಾರಕ್ಕೆ ಬ್ರೇಕ್

Advt_Headding_Middle
Advt_Headding_Middle

 

ಕೊಡಗು ಜಿಲ್ಲೆಯಲ್ಲಿ 2018-19 ಮತ್ತು 2019-20ನೇ ಸಾಲಿನ ಮಳೆಗಾಲದಲ್ಲಿ ಸಂಭವಿಸಿದ ಭಾರೀ ಮಳೆಯಿಂದ ಜಿಲ್ಲೆಯ ಹಲವು ಭಾಗಗಳಲ್ಲಿ ಭೂಕುಸಿತವಾಗಿದ್ದು, ಜೀವಹಾನಿಯೊಂದಿಗೆ ಭಾರೀ ಪ್ರಮಾಣದಲ್ಲಿ ಸಾರ್ವಜನಿಕ ಆಸ್ತಿ-ಪಾಸ್ತಿಗಳು ಹಾನಿಯಾಗಿದ್ದು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವ ಸಲುವಾಗಿ ಜಿಲ್ಲೆಯಾದ್ಯಂತ ಜೂ.11ರಿಂದ ಆಗಸ್ಟ್ 10ರವರೆಗೆ ಭಾರೀ ಗಾತ್ರದ ವಾಹನ ಸಂಚಾರವನ್ನು ನಿಷೇಧಿಸಿ ಕೊಡಗು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಆದೇಶ ಹೊರಡಿಸಿದ್ದಾರೆ.


ಕಳೆದ ಎರಡು ವರ್ಷಗಳ ಕಾಲ ಮಳೆಗಾಲದಲ್ಲಿ ಸಂಭವಿಸಿದ ಭೀಕರ ಭೂಕುಸಿತದಿಂದಾಗಿ ಅದೆಷ್ಟೋ ಮನೆಗಳು, ಕೃಷಿ ಪ್ರದೇಶಗಳು ಹಾನಿಯಾಗಿದ್ದವು. ಆ ದಿಸೆಯಲ್ಲಿ ಜಿಲ್ಲೆಯ ರಸ್ತೆಗಳಲ್ಲಿ ಭಾರೀ ತಿರುವುಗಳು ಹಾಗೂ ಏರಿಳಿತದಿಂದ ಕೂಡಿದ್ದು, ಪ್ರಸ್ತುತ ಮುಂಗಾರು ಪ್ರಾರಂಭವಾದ ಹಿನ್ನೆಲೆಯಲ್ಲಿ ಮಳೆಯ ಪ್ರಮಾಣ ಹೆಚ್ಚಿದಂತೆ ನೆಲದಲ್ಲಿ ತೇವಾಂಶ ಹೆಚ್ಚಾಗಿ, ಅಧಿಕ ಭಾರದ ವಾಹನಗಳು ಸಂಚರಿಸಿದಲ್ಲಿ ಭೂಕುಸಿತ ಉಂಟಾಗಿ ಅನಾಹುತಗಳಾಗುವ ಸಾಧ್ಯತೆ ಹೆಚ್ಚಿದೆ. ಆದ್ದರಿಂದ ಜಿಲ್ಲೆಯ ರಸ್ತೆಗಳು, ಸಾರ್ವಜನಿಕ ಆಸ್ತಿ-ಪಾಸ್ತಿ ರಕ್ಷಣೆ ಹಾಗೂ ಪ್ರಯಾಣಿಕರ ಮತ್ತು ಸಾರ್ವಜನಿಕರ ಸುರಕ್ಷತೆಯ ಹಿತದೃಷ್ಟಿಯಿಂದ ಭಾರೀ ಮಳೆಯಾಗುವ ಕಾರಣ ಎರಡು ತಿಂಗಳ ಮಟ್ಟಿಗೆ ಭಾರೀ ಗಾತ್ರದ ವಾಹನ ಸಂಚಾರವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಆದೇಶಿಸಿದ್ದಾರೆ.

 

ನಿರ್ಬಂಧಿತ ವಾಹನಗಳು: ಎಲ್ಲಾ ರೀತಿಯ ಮರದ ದಿಮ್ಮಿ ಮತ್ತು ಮರಳು ಸಾಗಾಣಿಕೆ ವಾಹನಗಳು, ವಾಹನದ ನೋಂದಣಿ ತೂಕ 16,200 ಕೆ.ಜಿ.ಗಿಂತ ಹೆಚ್ಚಿನ ಸರಕು ಸಾಗಾಣೆ ಮಾಡುವ ಸರಕು ಸಾಗಾಣಿಕೆ ವಾಹನಗಳು. ಭಾರೀ ವಾಹನಗಳಾದ ಬುಲೆಟ್ ಟ್ಯಾಂಕರ್, ಶಿಪ್ ಕಾರ್ಗೋ ಕಂಟೈನರ್ , ಲಾಂಗ್ ಚೇಸಿಸ್ (ಮಲ್ಟಿ ಆಕ್ಸಿಲ್) ವಾಹನಗಳಿಗೆ ನಿಷೇಧ ಹೇರಲಾಗಿದೆ.

ನಿರ್ಬಂಧದಿಂದ ವಿನಾಯಿತಿ ನೀಡಿದ ವಾಹನಗಳು:
ಅಡುಗೆ ಅನಿಲ ಮತ್ತು ಇಂಧನ ಪೂರೈಕೆ ವಾಹನಗಳು, ಹಾಲು ಪೂರೈಕೆ ವಾಹನಗಳು, ಸರ್ಕಾರಿ ಕೆಲಸದ ನಿಮಿತ್ತ ಉಪಯೋಗಿಸಲ್ಪಡುವ ವಾಹನಗಳು, ಶಾಲಾ ಕಾಲೇಜು ಮತ್ತು ಸಾರ್ವಜನಿಕ ಪ್ರಯಾಣಿಕರ ವಾಹನಗಳು (ಮಲ್ಟಿ ಆಕ್ಸಿಲ್ ಬಸ್‍ಗಳು ಸೇರಿದಂತೆ) ಈ ಬಗೆಯ ವಾಹನಗಳಿಗೆ ನಿರ್ಬಂಧದಿಂದ ವಿನಾಯಿತಿಯನ್ನು ನೀಡಲಾಗಿದೆ ಎಂದು ಕೊಡಗು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ತಿಳಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.