Breaking News

ಐವರ್ನಾಡು ಗ್ರಾಮ ಪಂಚಾಯತ್ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ

Advt_Headding_Middle
Advt_Headding_Middle

ದ.ಕ.ಜಿಲ್ಲಾ ಪಂಚಾಯತ್ ಮಂಗಳೂರು,ತಾಲೂಕು ಪಂಚಾಯತ್ ಸುಳ್ಯ,
ಐವರ್ನಾಡು ಗ್ರಾಮ ಪಂಚಾಯತ್ ನ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನಾ ಕಾರ್ಯ ಕ್ರಮವು ಜೂ.26 ರಂದು ನಡೆಯಿತು.


ಗ್ರಾಮ ವಿಕಾಸ ಮಿನಿಸಭಾಭವನ ವಿಕಾಸ ಭವನವನ್ನು ಜಿಲ್ಲಾ ಪಂಚಾಯತ್ ಸದಸ್ಯ ಹರೀಶ್ ಕಂಜಿಪಿಲಿ ಉದ್ಘಾಟಿಸಿದರು.ಶಾಸಕ ಎಸ್.ಅಂಗಾರರವರು ನಾಮಫಲಕವನ್ನು ಅನಾವರಣಗೊಳಿಸಿದರು.


,ಘನತ್ಯಾಜ್ಯ ಘಟಕವನ್ನು ಜಿಲ್ಲಾ ಪಂಚಾಯತ್ ಸದಸ್ಯ ಎಸ್.ಎನ್.ಮನ್ಮಥ,ಕಾಂಕ್ರೀಟೀಕರಣ ರಸ್ತೆಯನ್ನು ತಾಲೂಕು ಪಂಚಾಯತ್ ಅಧ್ಯಕ್ಷ ಚನಿಯ ಕಲ್ತಡ್ಕ,ಸ್ಮಶಾನ ಕಟ್ಟಡವನ್ನು ತಾಲೂಕು ಪಂಚಾಯತ್ ಸದಸ್ಯ ರಾಧಾಕೃಷ್ಣ ಬೊಳ್ಳೂರು, ಹಾಗೂ ಸ್ಮಶಾನ ಘಟಕಕ್ಕೆ ನೀರು ಸರಬರಾಜು ಯೋಜನೆಯನ್ನು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಚೈತ್ರಾ ಕಟ್ಟತ್ತಾರು,ಸ್ವಚ್ಛಭಾರತ್ ಮಿಷನ್ ಸಾರ್ವಜನಿಕ ಶೌಚಾಲಯ ಕಟ್ಟಡವನ್ನು ಜಿಲ್ಲಾ ಪಂಚಾಯತ್ ಸದಸ್ಯೆ ಶ್ರೀಮತಿ ಪುಷ್ಪಾವತಿ ಬಾಳಿಲರವರು ಉದ್ಘಾಟಿಸಿದರು.


ಬಳಿಕ ನಡೆದ ಸಭಾ ಕಾರ್ಯಕ್ರಮವನ್ನು ಶಾಸಕ ಎಸ್ .ಅಂಗಾರರವರು ಮತ್ತು ಹರೀಶ್ ಕಂಜಿಪಿಲಿಯವರು ದೀಪಬೆಳಗಿಸಿ ಉದ್ಘಾಟಿಸಿ ಶುಭಹಾರೈಸಿದರು.

ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಚೈತ್ರ ಕಟ್ಟತ್ತಾರು ವಹಿಸಿದ್ದರು.
ವೇದಿಕೆಯಲ್ಲಿ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಭವಾನಿಶಂಕರ್ ಎನ್.,ಪಂ.ರಾಜ್.ಇಂಜಿನಿಯರಿಂಗ್ ಉಪವಿಭಾಗದ ಸಹಾಯಕ ಕಾರ್ಯಪಾಲಕ ಹನುಮಂತರಾಯಪ್ಪ,ಸಹಕಾರಿ ಸಂಘದ ಉಪಾಧ್ಯಕ್ಷ ವಿಕ್ರಂ ಪೈ,ಮುಖ್ಯಕಾರ್ಯನಿರ್ವಹಣಾಧಿಕಾರಿ ರವಿಪ್ರಸಾದ್ ಸಿ.ಕೆ.,ಇಂಜಿನಿಯರ್ ಎಸ್.ಎಸ್.ಹುಕ್ಕೇರಿ,ಗ್ರಾಮ ಪಂಚಾಯತ್ ಸದಸ್ಯರು ,ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಯು.ಡಿ.ಶೇಖರ್ ಉಪಸ್ಥಿತರಿದ್ದರು.


ಗ್ರಾ.ಪಂ.ಸದಸ್ಯ ಶಾಂತಾರಾಮ ಕಣಿಲೆಗುಂಡಿ ಸ್ವಾಗತಿಸಿ,ಉಪಾಧ್ಯಕ್ಷ ಬಾಲಕೃಷ್ಣ ಕೀಲಾಡಿ ಪ್ರಾಸ್ತಾವಿಕ ಮಾತನಾಡಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.