ಸುಳ್ಯ ಎಸ್.ಎಸ್.ಎಫ್ ಡಿವಿಷನ್ ಕ್ಯೂ ಟೀಂ ವತಿಯಿಂದ ಸರಕಾರಿ ಆಸ್ಪತ್ರೆ ಅವರಣ ಸ್ವಚ್ಛತೆ

Advt_Headding_Middle
Advt_Headding_Middle

ಕರ್ನಾಟಕ ರಾಜ್ಯ ಸುನ್ನೀ ಸ್ಟುಡೆಂಟ್ಸ್ ಫೆಡರೇಶನ್(ಎಸ್.ಎಸ್.ಎಫ್) ಸುಳ್ಯ ಡಿವಿಷನ್ ಕ್ಯೂ ಟೀಂ ವತಿಯಿಂದ ಸುಳ್ಯ ತಾಲೂಕು ಸಾರ್ವಜನಿಕ ಆರೋಗ್ಯ ಕೇಂದ್ರದ ಪರಿಸರವನ್ನು  ೨೮ ರ0ದು ಸ್ವಚ್ಛಗೊಳಿಸಲಾಯಿತು. ಬೆಳಗ್ಗೆ ೯ ಗಂಟೆಗೆ ಆರಂಭಗೊಂಡ ಸ್ವಚ್ಛತಾ ಕಾರ್ಯಕ್ಕೆ ಚಾಲನೆ ನೀಡಿದ ಸಾರ್ವಜನಿಕ ತಾಲೂಕು ಆಸ್ಪತ್ರೆಯ ಆರೋಗ್ಯಾಧಿಕಾರಿ ಡಾ. ಕರುಣಾಕರ ಕೆ.ವಿ ರವರು ಎಸ್.ವೈ.ಎಸ್ ಹಾಗೂ ಎಸ್.ಎಸ್.ಎಫ್ ಇದರ ಕಾರ್ಯವೈಖರಿಯನ್ನು ಅಭಿನಂದಿಸಿದರು.

ತಾಲೂಕು ಆಸ್ಪತ್ರೆಯ ಶವಾಗಾರದ ಪರಿಸರದಲ್ಲಿ ಶೇಖರಣೆಗೊಂಡಿದ್ದ ಕಸ ತ್ಯಾಜ್ಯಗಳನ್ನು ಜೆಸಿಬಿ ಯಂತ್ರದ ಮೂಲಕ ಅಲ್ಲಿಂದ ತೆಗೆಸಿ ಶುಚಿಗೊಳಿಸಲಾಯಿತು. ಆಸ್ಪತ್ರೆಯ ಮುಂಭಾಗದ ಮೂಲಕ ಶವಾಗಾರಕ್ಕೆ ತೆರಳುವ ದಾರಿ ಮತ್ತು ಆಸ್ಪತ್ರೆಯ ಸುತ್ತಮುತ್ತಲೂ ಬೆಳೆದಿದ್ದ ಕಾಡು ಕೊಳೆಗಳನ್ನು ಕಟಾವು ಯಂತ್ರದ ಮೂಲಕ ತೆರವುಗೊಳಿಸಿ ಶುಚೀಕರಣ ನಡೆಸಲಾಯಿತು.

ಎಸ್. ಎಸ್. ಎಫ್ ಸುಳ್ಯ ಡಿವಿಷನ್ ಅಧ್ಯಕ್ಷ ಜಿ.ಕೆ ಇಬ್ರಾಹಿಂ ಅಮ್ಜದಿ, ದ.ಕ ಈಸ್ಟ್ ಝೋನ್ ಬ್ಲಡ್ ಸೈಬೋ ಉಸ್ತುವಾರಿ ಸಿದ್ದೀಖ್ ಗೂನಡ್ಕ, ಎಸ್.ವೈ.ಎಸ್ ನಾಯಕರುಗಳಾದ ಹಸೈನಾರ್ ಗುತ್ತಿಗಾರು, ಸಂಶುದ್ದೀನ್ ಪಳ್ಳಿಮಜಲು ಮುಂತಾದವರ ನೇತೃತ್ವದಲ್ಲಿ ಸುಮಾರು ಮೂವತ್ತರಷ್ಟು ಕಾರ್ಯಕರ್ತರು ಸ್ವಚ್ಛತಾ ಕಾರ್ಯದಲ್ಲಿಕಾರ್ಯಕರ್ತರನ್ನು ಸುಳ್ಯ ನಗರ ಪಂಚಾಯತ್ ಸದಸ್ಯ ಉಮರ್ ಕೆ.ಎಸ್. ರವರು ಪಾಲ್ಗೊಂಡು ಮಾರ್ಗದರ್ಶನಗಳನ್ನು ನೀಡಿ ಕಾರ್ಯಕರ್ತರಿಗೆ ಸಹಕರಿಸಿದರು. ಎಸ್‌ಎಸ್‌ಎಫ್ ಸುಳ್ಯ ಡಿವಿಜನ್ ಮಾಜಿ ಅಧ್ಯಕ್ಷ ಸ್ವಬಾಹುದ್ದೀನ್ ಹಿಮಮಿ, ಕೆಸಿಎಫ್ ಅಬುಧಾಬಿ ಪಬ್ಲೀಕೇಶನ್ ಕನ್ವಿನರ್ ಕಬೀರ್ ಜಟ್ಟಿಪಳ್ಳ ಸ್ವಚತೆ ಬಗ್ಗೆ ಮಾಹಿತಿ ನೀಡಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.