ಬಾಳಿಲ ಗ್ರಾಮ ಪಂಚಾಯತ್ ನಲ್ಲಿ ಸನ್ಮಾನ – ಬೀಳ್ಕೊಡುಗೆ

Advt_Headding_Middle
Advt_Headding_Middle

 

ಬಾಳಿಲ ಗ್ರಾಮ ಪಂಚಾಯತ್ ನಲ್ಲಿ ಸುಮಾರು 22 ವರ್ಷ ಗಳ ಕಾಲ ಸೇವೆ ಸಲ್ಲಿಸಿ ಕಾರ್ಯದರ್ಶಿಯಾಗಿ ಭಡ್ತಿ ಹೊಂದಿದ ಶ್ರೀಮತಿ ಜಯಂತಿಯವರಿಗೆ ಸನ್ಮಾನ ಮತ್ತು ಬೀಳ್ಕೊಡುಗೆಯು ಜೂ.25 ರಂದು ಪಂಚಾಯತ್ ನಲ್ಲಿ ನಡೆಯಿತು.


ಗ್ರಾಮ ಪಂಚಾಯತ್ ಅಧ್ಯಕ್ಷ ಕೃಷ್ಣಪ್ಪ ಪೂಜಾರಿಯವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಆಡಳಿತ ಮಂಡಳಿ ವತಿಯಿಂದ ಶ್ರೀಮತಿ ಜಯಂತಿಯವರನ್ನು ಶಾಲು ಹೊದಿಸಿ,ಫಲ,ಪುಷ್ಪ ಸ್ಮರಣಿಕೆ ನೀಡಿ ಸನ್ಮಾನಿಸಲಾಯಿತು.
ಪಂಚಾಯತ್ ಗೆ ನೂತನ ಕಾರ್ಯದರ್ಶಿಯಾಗಿ ಆಗಮಿಸಿದ ಜಯಶೀಲ ರೈಯವರನ್ನು ಸ್ವಾಗತಿಸಲಾಯಿತು.


ಈ ಸಂದರ್ಭದಲ್ಲಿ ತಾಲೂಕು ಪಂಚಾಯತ್ ಸದಸ್ಯೆ ಶ್ರೀಮತಿ ಜಾಹ್ನವಿ ಕಾಂಚೋಡು,ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ಹೇಮಲತಾ ಕಾಯಾರ,ಸದಸ್ಯರಾದ ಯು.ರಾಧಾಕೃಷ್ಣ ರಾವ್, ರಮೇಶ್ ರೈ,ರವೀಂದ್ರ ರೈ,ವಾರಿಜ ಬೊಳಿಯಕಂಡ,ಸರಸ್ವತಿ ಸಿ.ಎಚ್, ಯಮುನಾ, ಶೀನಪ್ಪ ಕೋಚೋಡು, ಜಯಕುಮಾರಿಯವರು ಉಪಸ್ಥಿತರಿದ್ದು ಶುಭಹಾರೈಸಿದರು.
ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಚಂದ್ರಾವತಿ ಸ್ವಾಗತಿಸಿ, ವಂದಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.