Breaking News

ಸುಳ್ಯ, ಕಡಬ ಆಸ್ಪತ್ರೆಗಳಲ್ಲಿ ಕೊರೋನಾ ಚಿಕಿತ್ಸೆಗೆ 1.03 ಕೋ.ರೂ.ಅನುದಾನ

Advt_Headding_Middle
Advt_Headding_Middle

 

ಸುಳ್ಯ ವಿಧಾನಸಭಾ ಕ್ಷೇತ್ರಕ್ಕೆ ಒಳಪಟ್ಟ ಸುಳ್ಯ ತಾಲೂಕು ಆಸ್ಪತ್ರೆ ಹಾಗೂ ಕಡಬ ಸಮುದಾಯ ಆಸ್ಪತ್ರೆಗೆ ಕೋವಿಡ್-19 ರೋಗಿಗಳಿಗೆ ಚಿಕಿತ್ಸೆ ನೀಡುವ ಸಲುವಾಗಿ ಸಲಕರಣೆ ಅಳವಡಿಕೆಗಾಗಿ 1.03ಕೋಟಿ ರೂ. ಅನುದಾನ ಮಂಜೂರುಗೊಂಡಿದೆ ಎಂದು ಸುಳ್ಯ ಶಾಸಕ ಎಸ್.ಅಂಗಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹೈಪ್ರೋ ಆಕ್ಸಿಜನ್ ಹಾಗೂ ಏರ್ ಮತ್ತು ವ್ಯಾಕ್ಯೂಮ್ ಪಾಯಿಂಟ್ ಅಳವಡಿಸಲು 50 ಹಾಸಿಗೆಗಳ ಸುಳ್ಯ ತಾಲೂಕು ಆಸ್ಪತ್ರೆಗೆ 55ಲಕ್ಷ ರೂ. ಹಾಗೂ 30 ಹಾಸಿಗೆಗಳ ಕಡಬ ಸಮುದಾಯ ಆಸ್ಪತ್ರೆಗೆ 48 ಲಕ್ಷ ರೂ. ಅನುದಾನ ವಿಂಗಡಿಸಲಾಗಿದೆ. ಈಗಾಗಲೇ ಈ ವಿಚಾರದಲ್ಲಿ ಸರಕಾರಕ್ಕೆ ಮನವಿ ಮಾಡಿದ್ದ ಹಿನ್ನಲೆಯಲ್ಲಿ ಆರೋಗ್ಯ ಸಚಿವ ಶ್ರೀರಾಮುಲು ಅವರು ಅನುದಾನ ಮಂಜೂರುಗೊಳಿಸಿ ಆದೇಶ ನೀಡಿದ್ದಾರೆ ಎಂದು ಶಾಸಕರು ತಿಳಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.