Breaking News

ನಿವೃತ್ತ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನಿತ್ಯಾನಂದ ಮಾಪ್ಲಕಜೆ ರವರಿಗೆ ಬೀಳ್ಕೊಡುಗೆ

Advt_Headding_Middle
Advt_Headding_Middle


ನೆಲ್ಲೂರು ಕೆಮ್ರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ 33 ವರ್ಷ ಸೇವೆ ಸಲ್ಲಿಸಿ ಪದೋನ್ನತಿ ಹೊಂದಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹುದ್ದೆಯಿಂದ ನಿವೃತ್ತರಾದ ನಿತ್ಯಾನಂದ ರವರಿಗೆ ಬೀಳ್ಕೊಡುಗೆ ಸಮಾರಂಭವು ಜು. 8 ರಂದು ಸುಳ್ಯದಲ್ಲಿ ಜರುಗಿದ ಸುಳ್ಯ ತಾಲೂಕು ಸಹಕಾರ ಸಂಘಗಳ 20 ಅಂಕ ಸಭೆಯಲ್ಲಿ ಜರುಗಿತು. ಸುಳ್ಯ ತಾಲೂಕು ಸಹಕಾರ ಯೂನಿಯನ್ ಅಧ್ಯಕ್ಷ ರಮೇಶ ದೇಲಂಪಾಡಿ ನಿವೃತ್ತರನ್ನು ಸನ್ಮಾನಿಸಿ ಶುಭ ಹಾರೈಸಿದರು. ಸನ್ಮಾನ ಸ್ವೀಕರಿಸಿದ ನಿತ್ಯಾನಂದರು ಕೃತಜ್ಞತೆ ಸಲ್ಲಿಸಿದರು. ಪುತ್ತೂರು ವಿಭಾಗದ ಸಹಕಾರ ಸಂಘಗಳ ಸಹಾಯಕ ನಿಬಂಧಕಿ ಸುಕನ್ಯಾ, ಸುಳ್ಯ ತಾಲೂಕಿನ ಸಹಕಾರ ಸಂಘಗಳ ಅಧ್ಯಕ್ಷರುಗಳು, ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಮೊದಲಾದವರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.