ಸುಳ್ಯ ಪೊಲೀಸ್ ಠಾಣೆ ಸೀಲ್‌ಡೌನ್

Advt_Headding_Middle
Advt_Headding_Middle

ಎರಡು ದಿನ ಸಾರ್ವಜನಿಕರಿಗೆ ನಿರ್ಬಂಧ


ಸುಳ್ಯ ಪೊಲೀಸರು ವಶಕ್ಕೆ ತೆಗೆದುಕೊಂಡ ಆರೋಪಿಯೊಬ್ಬನಿಗೆ ಕೊರೊನಾ ಪಾಸಿಟಿವ್ ಪತ್ತೆಯಾದ ಹಿನ್ನಲೆಯಲ್ಲಿ ಸುಳ್ಯ ಪೊಲೀಸ್ ಠಾಣೆಯನ್ನು ಸೀಲ್ ಡೌನ್ ಮಾಡಲಾಗಿದ್ದು 2 ದಿನಗಳ ಕಾಲ ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧಿಸಲಾಗಿದೆ.
ಕೆಲವು ದಿನಗಳ ಹಿಂದೆ ಜಾನುವಾರುಗಳನ್ನು ಹಿಂಸಾತ್ಮಕ ರೀತಿಯಲ್ಲಿ ಸಾಗಿಸುತ್ತಿದ್ದ ಕರಿಕೆಯ ಅಬ್ದುಲ್ ಫಾರೂಕ್ ಎಂಬಾತನನ್ನು ಭಜರಂಗದಳದ ಯುವಕರು ಬೆನ್ನಟ್ಟಿದ್ದರು.

Adervitsment 

ಸುಳ್ಯದಲ್ಲಿ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದರು. ಈತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸುವ ವೇಳೆ ಕೊರೋನಾ ಟೆಸ್ಟ್‌ಗೆ ಸೂಚಿಸಲಾಗಿತ್ತು. ಟೆಸ್ಟ್ ನಡೆದಾಗ ಕೊರೋನಾ ಸೋಂಕು ಇರುವುದು ದೃಢಪಟ್ಟಿತ್ತು. ಈ ಹಿನ್ನಲೆಯಲ್ಲಿ ಸುಳ್ಯ ಪೊಲೀಸ್ ಠಾಣೆ 2 ದಿನಗಳ ಮಟ್ಟಿಗೆ ಸೀಲ್‌ಡೌನ್ ಮಾಡಿ ಸ್ಯಾನಿಟೈಸ್ ಮಾಡಲಾಗುವುದು ಎಂದು ತಿಳಿದುಬಂದಿದೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.