ಜು.25: ನಾಗರಪಂಚಮಿಯಂದು ಕೋವಿಡ್-19 ಹಿನ್ನೆಲೆಯಲ್ಲಿ ಅಡ್ಕಾರು ಶ್ರೀ ಸುಬ್ರಹ್ಮಣ್ಯ ದೇವಾಲಯಕ್ಕೆ ಭಕ್ತಾದಿಗಳಿಗೆ ಪ್ರವೇಶ ನಿರ್ಬಂಧ

Advt_Headding_Middle
Advt_Headding_Middle

ದೇಶದಾದ್ಯಂತ ಹರಡುತ್ತಿರುವ ಕೋವಿಡ್-19 ಕೊರೊನಾ ವೈರಸ್ ನಿಂದಾಗಿ ಈ ಬಾರಿ ಎಲ್ಲಾ ಹಬ್ಬಹರಿದಿನಗಳನ್ನು ಜನಸೇರದೆ ಅತ್ಯಂತ ಸರಳ ರೀತಿಯಲ್ಲಿ ಆಚರಿಸುವಂತೆ ರಾಜ್ಯ ಸರಕಾರ ಆದೇಶ ಹೊರಡಿಸಿದ್ದು, ಜು.25ರಂದು ನಡೆಯಲಿರುವ ನಾಗರ ಪಂಚಮಿಯಂದು ಅಡ್ಕಾರು ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಾಲಯಕ್ಕೆ ಭಕ್ತಾದಿಗಳಿಗೆ ಪ್ರವೇಶವನ್ನು ನಿರ್ಬಂಧಿಸಲಾಗಿದೆ.
ಕೋವಿಡ್-19 ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ದೇವಾಲಯಕ್ಕೆ ಅಧಿಕ ಸಂಖ್ಯೆಯಲ್ಲಿ ಭಕ್ತಾಧಿಗಳು ಆಗಮಿಸಿದರೆ, ಸಾಮಾಜಿಕ ಅಂತರವನ್ನು ಕಾಪಾಡುವುದು ಕಷ್ಟವಾಗುವುದರಿಂದ ಮುಂಜಾಗ್ರತಾ ಕ್ರಮವಾಗಿ ನಾಗರಪಂಚಮಿಯಂದು ಕಡ್ಡಾಯವಾಗಿ ಭಕ್ತಾದಿಗಳಿಗೆ ಭೇಟಿ ನಿರ್ಬಂಧಿಸಲಾಗಿದೆ.
ಆದರೆ ದೇಗುಲದಲ್ಲಿ ಅರ್ಚಕರು ವೈದಿಕ ವಿಧಿ-ವಿಧಾನಗಳ ಮೂಲಕ ಪೂಜಾ ಕಾರ್ಯ ನೆರವೇರಿಸಲಿದ್ದು, ಅರ್ಚಕರು ಮತ್ತು ದೇವಾಲಯದ ಸಿಬ್ಬಂದಿಗಳು ಮಾತ್ರ ಭಾಗವಹಿಸುತ್ತಾರೆ. ಆದ್ದರಿಂದ ನಾಗರಪಂಚಮಿಯಂದು ಯಾವುದೇ ಭಕ್ತಾದಿಗಳು ದೇವಾಲಯಕ್ಕೆ ಭೇಟಿ ನೀಡದೆ ಸಹಕರಿಸಬೇಕೆಂದು ದೇವಾಲಯದ ವತಿಯಿಂದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ನಾಗರ ಪಂಚಮಿ ದಿನದಂದು ಶ್ರೀ ಸುಬ್ರಹ್ಮಣ್ಯನ ಸನ್ನಿಧಿಯಲ್ಲಿ ಯಾವುದೇ ಸೇವೆಗಳು, ಸೇವಾ ಪ್ರಸಾದಗಳು, ತೀರ್ಥಪ್ರಸಾದ, ಅನ್ನಸಂತರ್ಪಣೆ ನಡೆಯುವುದಿಲ್ಲ. ಹಾಗೂ ಭಕ್ತಾದಿಗಳಿಂದ ಹಾಲು, ಸಿಯಾಳ, ಹಣ್ಣುಕಾಯಿ ಸೇರಿದಂತೆ ಯಾವುದೇ ಪೂಜಾ ವಸ್ತುಗಳನ್ನು ಸ್ವೀಕರಿಸುವುದಿಲ್ಲ. ಮುಂದಿನ ದಿನಗಳಲ್ಲಿ ಅನುಕೂಲಕರ ಪರಿಸ್ಥಿತಿ ಉಂಟಾದಾಗ ಕ್ಷೇತ್ರದಲ್ಲಿ ಭಕ್ತಾದಿಗಳಿಗೆ ಸೇವೆಗಳನ್ನು ನಡೆಸಲು ಅವಕಾಶ ಕಲ್ಪಿಸಿಕೊಡಲಾಗುವುದು ಎಂದು ದೇವಾಲಯದ ವತಿಯಿಂದ ತಿಳಿಸಲಾಗಿದೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.