Breaking News

ಮಂಗಳೂರಿನ ಅತ್ತಾವರ ಕೆ.ಎಂ.ಸಿ. ಆಸ್ಪತ್ರೆಯಲ್ಲಿ ಕೊರೋನಾ ವಾರಿಯರ್ ಶ್ರೀಮತಿ ಸಂಗೀತಾ ಪಿ.ಕೆ.

Advt_Headding_Middle
Advt_Headding_Middle

 

ಸುಳ್ಯ ತಾಲೂಕು ಜಾಲ್ಸೂರು ಗ್ರಾಮದ ಅಡ್ಕಾರ್ ಕೋನಡ್ಕ ಪದವು ನಿವಾಸಿಯಾಗಿರುವ ಜಿ.ಆರ್.ಕೃಷ್ಣ ಮತ್ತು ಸರೋಜಿನಿ ದಂಪತಿಗಳ ಪುತ್ರಿ ಸಂಗೀತಾ ಪಿ.ಕೆ.ರವರು ಮಂಗಳೂರಿನ ಅತ್ತಾವರದ ಕೆ.ಎಂ.ಸಿ. ಆಸ್ಪತ್ರೆಯಲ್ಲಿ ಕೊರೋನಾ ವಾರಿಯರ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ಕನಕಮಜಲು-ಬಾಳೆಹಿತ್ತಿಲಿನ ಸತೀಶ್‌ರವರ ಪತ್ನಿಯಾಗಿದ್ದು, ಇವರಿಗೆ ವಿಶಾಖ್ ಮತ್ತು ಲಿಶಾನ್ ಎಂಬ ಇಬ್ಬರು ಮಕ್ಕಳಿದ್ದಾರೆ.

Advertisement


ಸುಳ್ಯದ ಶ್ರೀ ಶಾರದಾ ಮಹಿಳಾ ವಿದ್ಯಾಲಯದಲ್ಲಿ ಪ್ರೌಢಶಿಕ್ಷಣವನ್ನು, ಜೂನಿ ಯರ್ ಕಾಲೇಜಿನಲ್ಲಿ ಪದವಿ ಪೂರ್ವ ಶಿಕ್ಷಣವನ್ನು ಪಡೆದರು. ನಂತರ ನರ್ಸಿಂಗ್ ತರಬೇತಿಯನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಪಡೆದು, ಪುತ್ತೂರಿನ ಆದರ್ಶ ಆಸ್ಪತ್ರೆಯಲ್ಲಿ ೨ ತಿಂಗಳು ಕಾರ್ಯ ನಿರ್ವಹಿಸಿದರು. ನಂತರ ಮಂಗಳೂರಿನ ಅಥೆನಾ ಆಸ್ಪತ್ರೆಯಲ್ಲಿ ೨ ತಿಂಗಳುಗಳ ಕಾಲ ಕಾರ್ಯನಿರ್ವಹಿಸಿ, ಇದೀಗ ೧೦ ವರ್ಷಗಳಿಂದ ಮಂಗಳೂರಿನ ಅತ್ತಾವರ ಕೆ.ಎಂ.ಸಿ. ಆಸ್ಪತ್ರೆಯಲ್ಲಿ ೨ ಬಾರಿ ಭಡ್ತಿಯನ್ನು ಪಡೆದು, ಸೀನಿಯರ್ ಸ್ಟಾಫ್ ನರ್ಸ್ ಆಗಿ, ಸೇವೆ ಸಲ್ಲಿಸುತ್ತಿದ್ದಾರೆ. ಕಳೆದ ಕೆಲವು ದಿನಗಳಿಂದ ಕೊರೋನಾ ವಾರಿಯರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.