Breaking News

ಐವರ್ನಾಡಿನಲ್ಲಿ ಉಚಿತ ಅಣಬೆ ಕೃಷಿ ತರಬೇತಿ

Advt_Headding_Middle
Advt_Headding_Middle

 

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ , ತಾಲೂಕು ಪಂಚಾಯತ್ ಸುಳ್ಯ ,ತೋಟಗಾರಿಕಾ ಇಲಾಖೆ ಸುಳ್ಯ ಇದರ ವತಿಯಿಂದ ಗ್ರಾಮ ಪಂಚಾಯತ್ ಐವರ್ನಾಡು ಇದರ ಸಹಯೋಗದೊಂದಿಗೆ ತಾಲೂಕು ಪಂಚಾಯತ್ ಯೋಜನೆಯಡಿ ಸಮಗ್ರ ಸಂಜೀವಿನಿ ಸ್ವಸಹಾಯ ಸಂಘಗಳ ಸದಸ್ಯರುಗಳಿಗೆ ಅಣಬೆ ಕೃಷಿ ಬಗ್ಗೆ ತರಬೇತಿ ಕಾರ್ಯಕ್ರಮವು ಜು.30 ರಂದು ಐವರ್ನಾಡು ಗ್ರಾಮ ಪಂಚಾಯತ್ ಗ್ರಾಮ ವಿಕಾಸ ಸಭಾ ಭವನದಲ್ಲಿ ನಡೆಯಿತು.


ಸಮಗ್ರ ಸಂಜೀವಿನಿ ಸ್ವಸಹಾಯ ಸಂಘಗಳ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟದ ಅಧ್ಯಕ್ಷರಾದ ಶ್ರೀಮತಿ ಸುಜಾತ ಪವಿತ್ರಮಜಲು ರವರ ಅಧ್ಯಕ್ಷತೆ ವಹಿಸಿದ್ದರು.
ತರಬೇತಿ ಕಾರ್ಯಕ್ರಮದ ಉದ್ಘಾಟನೆಯನ್ನು ಜಾಲ್ಸೂರು ಜಿಲ್ಲಾ ಪಂಚಾಯತ್ ಸದಸ್ಯರಾದ ಶ್ರೀಮತಿ ಪುಷ್ಪಾವತಿ ಬಾಳಿಲರವರು ನೆರವೇರಿಸಿದರು.


ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಶ್ರೀಮತಿ ಸುಹಾನ ಸಹಾಯಕ ನಿರ್ದೇಶಕರು ತೋಟಗಾರಿಕಾ ಇಲಾಖೆ ಸುಳ್ಯ,ಶ್ರೀ ಹರಿಪ್ರಸಾದ್ ಜಿಲ್ಲಾ ಸಂಯೋಜಕರು NRLM ಮಂಗಳೂರು ಮತ್ತು ಗ್ರಾಮ ಪಂಚಾಯತ್ ನ ನಿಕಟ ಪೂರ್ವ ಸದಸ್ಯರುಗಳು, ಮಹೇಶ್ ತಾಲೂಕು ವಲಯ ಮೇಲ್ವಿಚಾರಕರು NRLM ತಾಲೂಕು ಪಂಚಾಯತ್ ಸುಳ್ಯ,ಗ್ರಾಮ ಪಂಚಾಯತ್ ಅಭಿವೃದ್ದಿ ಅಧಿಕಾರಿ ಯು.ಡಿ.ಶೇಖರ್ ಭಾಗವಹಿಸಿದ್ದರು.


ಸ್ವಸಹಾಯ ಸಂಘದ ಸದಸ್ಯರಿಗೆ ಅಣಬೆ ಕೃಷಿ ಬಗ್ಗೆ ತರಬೇತಿಯನ್ನು ಪ್ರಗತಿ ಪರ ಕೃಷಿಕರಾದ ತಿರ್ಥಾನಂದ ಕೊಡಂಕಿರಿರವರು ನೀಡಿದರು.

ಹಾಗೂ ತರಬೇತಿಯಲ್ಲಿ ಭಾಗವಹಿಸಿದ ಎಲ್ಲರಿಗೂ ಬುಕ್ ,ಪೆನ್ ಹಾಗೂ ಅಣಬೆ ಬೀಜ ಹಾಗೂ ಅಣಬೆ ಕಿಟ್ ನ್ನು ವಿತರಿಸಲಾಯಿತು. ತೋಟಗಾರಿಕಾ ಇಲಾಖೆಯ ಸಹಾಯಕ ನಿರ್ದೇಶಕರಾದ ಶ್ರೀಮತಿ ಸುಹಾನ ಸ್ವಾಗತಿಸಿದರು.

ತಾಲೂಕು ಪಂಚಾಯತ್ ವಲಯ ಮೇಲ್ವಿಚಾರಕರು NRLM ಮಹೇಶ್ ವಂದಿಸಿದರು.ಪಂಚಾಯತ್ ಅಭಿವೃದ್ದಿ ಅಧಿಕಾರಿ ಯು.ಡಿ ಶೇಖರ್ ಕಾರ್ಯಕ್ರಮ ನಿರೂಪಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.