ಅಯೋಧ್ಯೆ ಶ್ರೀರಾಮ ಜನ್ಮಭೂಮಿಯಲ್ಲಿ ಭೂಮಿಪೂಜೆ ಹಿನ್ನೆಲೆ ಅಡ್ಕಾರು ಶ್ರೀ ಸುಬ್ರಹ್ಮಣ್ಯ ದೇವಾಲಯದಲ್ಲಿ ವಿಶೇಷ ಪ್ರಾರ್ಥನೆ, ಪೂಜೆ

Advt_Headding_Middle
Advt_Headding_Middle


ಅಯೋಧ್ಯೆ ಶ್ರೀರಾಮ ಜನ್ಮಭೂಮಿಯಲ್ಲಿ ನೂತನ ರಾಮ ಮಂದಿರ ನಿರ್ಮಾಣಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭೂಮಿ ಪೂಜೆ ನೆರವೇರಿಸಲಿದ್ದು, ಆ ಪ್ರಯುಕ್ತ ಜಾಲ್ಸೂರು ಗ್ರಾಮದ ಅಡ್ಕಾರು ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಾಲಯದಲ್ಲಿ ವಿಶೇಷ ಪ್ರಾರ್ಥನೆ ಹಾಗೂ ಪೂಜೆಯು ಆ.5 ರಂದು ಜರುಗಿತು.
ರಾಜ್ಯ ಮುಜರಾಯಿ ಇಲಾಖೆಯ ನಿರ್ದೇಶನದಂತೆ ದೇವಾಲಯದಲ್ಲಿ ಶ್ರೀ ಸುಬ್ರಹ್ಮಣ್ಯ ಸ್ವಾಮಿಗೆ ವಿಶೇಷ ಪ್ರಾರ್ಥನೆ ಹಾಗೂ ಪೂಜೆಯು ಜರುಗಿತು.
ಈ ಸಂದರ್ಭದಲ್ಲಿ ದೇವಾಲಯದ ಅನುವಂಶಿಕ ಆಡಳಿತ ಮೊಕ್ತೇಸರ ಗುರುರಾಜ್ ಭಟ್ ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.