Breaking News

ಕೊರೋನಾ ಚಿಕಿತ್ಸೆ ಪಡೆಯುತ್ತಿರುವವರ ಮನೆಗೆ ಭೇಟಿ ನೀಡಿ, ಮನೆಯವರಿಗೆ ಧೈರ್ಯ ತುಂಬಿದ ನ. ಪಂ ಸದಸ್ಯೆ

Advt_Headding_Middle
Advt_Headding_Middle

ಕೋವಿಡ್ ೧೯ರ ರ್‍ಯಾಪಿಡ್ ಆಂಟಿಜೆನ್ ಪರೀಕ್ಷೆಗೆ ಒಳಗಾಗಿ ಪಾಸಿಟಿವ್ ಬಂದಿರುವ ಹಿನ್ನೆಲೆಯಲ್ಲಿ ಸುಳ್ಯ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಜಯನಗರ ೧೯ ನೇ ವಾರ್ಡಿನ ವ್ಯಕ್ತಿಯೋರ್ವರ ಮನೆಗೆ ಸ್ಥಳೀಯ ವಾರ್ಡ್‌ನ ನ.ಪಂ. ಸದಸ್ಯೆ ಶಿಲ್ಪಾ ಸುದೇವ್ ಭೇಟಿ ನೀಡಿ ಮನೆಯವರಿಗೆ ಧೈರ್ಯ ತುಂಬಿದ್ದಾರೆ. ಯಾವುದೇ ಸಮಸ್ಯೆಗಳಿದ್ದಲ್ಲಿ ತನ್ನನ್ನು ದೂರವಾಣಿ ಮೂಲಕ ಸಂಪರ್ಕಿಸುವಂತೆ ಭರವಸೆಯ ಮಾತುಗಳನ್ನು ನೀಡಿ ಮಾನವೀಯತೆ ಮೆರೆದಿದ್ದಾರೆ.
ಈ ರೋಗದ ಬಗ್ಗೆ ಹೆದರಿಕೆ ಬೇಡ ಜಾಗೃತೆಯನ್ನು ವಹಿಸಿಕೊಳ್ಳಿ. ಅವಧಿ ಮುಕ್ತಾಯಗೊಳ್ಳುವ ಸಮಯದವರೆಗೆ ಮನೆಯವರು ಯಾವುದೇ ಕೆಲಸ ಕಾರ್ಯಗಳಿಗೆ ಮನೆಯಿಂದ ಹೊರಗೆ ಬರದಂತೆ ಜಾಗ್ರತೆಯನ್ನು ವಹಿಸಿಕೊಳ್ಳಿ ಎಂದು ಹೇಳಿದ್ದಾರೆ ಎಂದು ತಿಳಿದುಬಂದಿದೆ.
ಈ ಸಂದರ್ಭದಲ್ಲಿ ನಗರ ಪಂಚಾಯತ್ ಇಂಜಿನಿಯರ್ ಶಿವಕುಮಾರ್, ಸಿಬ್ಬಂದಿಗಳು ಉಪಸ್ಥಿತರಿದ್ದರು. ಅದೇ ರೀತಿ ಆಶಾ ಕಾರ್ಯಕರ್ತೆಯರು, ಕೊರೋನ ವಾರಿಯರ್ಸ್ ತಂಡದವರು ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.