ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಸಂಸ್ಥೆಯ ಅನುಷ್ ಎ.ಎಲ್. ರಾಜ್ಯಕ್ಕೆ ಪ್ರಥಮ
2019-20 ನೇ ಸಾಲಿನ ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟಗೊಂಡಿದ್ದು, ಸುಬ್ರಹ್ಮಣ್ಯ ಕುಮಾರಸ್ವಾಮಿ ವಿದ್ಯಾಲಯದ ವಿದ್ಯಾರ್ಥಿ ಅನುಷ್ ಎ.ಎಲ್. ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ. 625 ಅಂಕಗಳಲ್ಲಿ 625 ಅಂಕ ಪಡೆದುಕೊಂಡಿದ್ದಾರೆ. ರಾಜ್ಯದಲ್ಲಿ ಒಟ್ಟು 6 ವಿದ್ಯಾರ್ಥಿಗಳು ಈ ಸಾಧನೆ ಮಾಡಿದ್ದಾರೆ. ಈತ ಬಳ್ಪ ಗ್ರಾಮದ ಲೋಕೇಶ್ ಎಣ್ಣೆಮಜಲು ಹಾಗೂ ಉಷಾ ದಂಪತಿಗಳ ಪುತ್ರ.