Breaking News

ಆಲೆಟ್ಟಿ ಸದಾಶಿವ ದೇವಳದಲ್ಲಿ ರಾಷ್ಟ್ರೀಯ ಹಬ್ಬಗಳ ದಿನಾಚರಣೆ ಸಮಿತಿ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ

Advt_Headding_Middle
Advt_Headding_Middle

ಸುಳ್ಯ ತಾಲೂಕು ರಾಷ್ಟ್ರೀಯ ಹಬ್ಬಗಳ ದಿನಾಚರಣಾ ಸಮಿತಿ, ಯಾದವ ಸಭಾ ಕರ್ನಾಟಕ ತಾಲೂಕು ಸಮಿತಿ, ಯಾದವ ಸಭಾ ಪ್ರಾದೇಶಿಕ ಸಮಿತಿ ಆಲೆಟ್ಟಿ ಮತ್ತು ಶ್ರೀ ಸದಾಶಿವ ದೇವಸ್ಥಾನ ಆಲೆಟ್ಟಿ ಇವುಗಳ ಜಂಟಿ ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆಯು ದೇವಸ್ಥಾನದ ಸಭಾಂಗಣದಲ್ಲಿ ಜರುಗಿತು.

ಸುಳ್ಯ ತಾಲೂಕು ತಹಶೀಲ್ದಾರ್ ಅನಂತಶಂಕರ್ ರವರು ಸಭಾಧ್ಯಕ್ಶತೆಯನ್ನು ವಹಿಸಿದ್ದರು. ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರರಾದ ಹೇಮಚಂದ್ರ ಬೈಪಡಿತ್ತಾಯ ರವರು ದೀಪ ಬೆಳಗಿಸಿ ಉದ್ಘಾಟಿಸಿದರು. ಸುಳ್ಯ ತಾಲೂಕು ಯಾದವ ಸಭಾ ಸಮಿತಿ ಅಧ್ಯಕ್ಷ ಜನಾರ್ಧನ ಕಣಕ್ಕೂರು ರವರು ಶ್ರೀ ಕೃಷ್ಣ ಪರಮಾತ್ಮ ನ ಕುರಿತು ಉಪನ್ಯಾಸ ನೀಡಿದರು.

ವೇದಿಕೆಯಲ್ಲಿ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಪ್ರಸನ್ನ ಕೆ ಸಿ ಬಡ್ಡಡ್ಕ , ಆಲೆಟ್ಟಿ ಪಂಚಾಯತ್ ಪಿ ಡಿ.ಒ.ಕೀರ್ತಿಪ್ರಸಾದ್ ರವರು ಉಪಸ್ಥಿತರಿದ್ದರು. ಕೆ.ವಿ.ಜಿ.ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಶ್ರೀಮತಿ ಶಾಂತಾ ಬೈಪಡಿತ್ತಾಯ ರವರು ಪ್ರಾರ್ಥಿಸಿದರು. ಯಾದವ ತಾಲೂಕು ಸಮಿತಿ ಕೋಶಾಧಿಕಾರಿ ಕರುಣಾಕರ ಹಾಸ್ಪಾರೆ ಪ್ರಾಸ್ತಾವಿಕ ಮಾತಿನೊಂದಿಗೆ ಸ್ವಾಗತಿಸಿದರು. ಆಲೆಟ್ಟಿ ಗ್ರಾಮ ಲೆಕ್ಕಾಧಿಕಾರಿ ಶರತ್ ರವರು ವಂದಿಸಿದರು. ಸುದ್ದಿ ಪತ್ರಿಕೆ ವರದಿ ಗಾರ ಶಿವಪ್ರಸಾದ್ ಆಲೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.