ಮಾರುತಿ ಇಂಟರ್ನ್ಯಾಷನಲ್ ಪಬ್ಲಿಕ್ ಸ್ಕೂಲ್ ಗೂನಡ್ಕದಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಸರಳವಾಗಿ ಆಚರಿಸಲಾಯಿತು. ಸಂಸ್ಥೆಯ ಅಧ್ಯಕ್ಷರಾದ ರುಕ್ಮಯ್ಯ ದಾಸ್ ರವರು ಧ್ವಜಾರೋಹಣವನ್ನು ನೆರವೇರಿಸಿ ಶುಭ ಹಾರೈಸಿದರು.
ಪ್ರಾಂಶುಪಾಲೆ ಶ್ರೀಮತಿ ಶೋಭಾ ಕಿಶೋರ್ ಸ್ವಾತಂತ್ರ್ಯ ದಿನಾಚರಣೆಯ ಮಹತ್ವವನ್ನು ತಿಳಿಸಿದರು. ಪಿಟಿಎ ಅಧ್ಯಕ್ಷರಾದ ಅಬುಸಾಲಿ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳನ್ನು ತಿಳಿಸಿದರು. ಶಿಕ್ಷಕ ಧನರಾಜ್ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.