ಸುಳ್ಯದ ಕೆ.ವಿ.ಜಿ ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆಯಲ್ಲಿ ೭೪ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯನ್ನು ಆಗಸ್ಟ್ ೧೫ರಂದು ಕೋವಿಡ್ -೧೯ ರ ಕಾರಣ ಸರಳವಾಗಿ ಆಚರಿಸಲಾಯಿತು. ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಕುರುಂಜಿಭಾಗ್, ಸುಳ್ಯ ಇದರ ಅಧ್ಯಕ್ಷರಾದ ಡಾ. ಕೆ. ವಿ. ಚಿದಾನಂದ ಇವರು ಧ್ವಜಾರೋಹಣವನ್ನು ನೆರವೇರಿಸಿ ಸ್ವಾತಂತ್ರ್ಯೋತ್ಸವದ ಸಂದೇಶ ಸಾರಿದರು. ಮುಖ್ಯ ಅತಿಥಿಗಳಾಗಿ ಕೆ.ವಿ.ಜಿ. ಮೆಡಿಕಲ್ ಕಾಲೇಜಿನ ಡೀನ್ ಡಾ. ನೀಲಾಂಬಿಕೈ ನಟರಾಜನ್ ಉಪಸ್ಥಿತರಿದ್ದರು. ಈ ಕಾರ್ಯಕ್ರಮದಲ್ಲಿ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಕುರುಂಜಿಭಾಗ್, ಸುಳ್ಯ ಇದರ ಕೋಶಾಧಿಕಾರಿ ಶ್ರೀಮತಿ. ಶೋಭ ಚಿದಾನಂದ, ಡೈರೆಕ್ಟರ್ ಮಿ. ಅಕ್ಷಯ್ ಕೆ.ಸಿ., ಕೆ.ವಿ.ಜಿ ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ ಸುಳ್ಯ ಇದರ ಪ್ರಾಂಶುಪಾಲರಾದ ಡಾ. ಲೀಲಾಧರ ಡಿ. ವಿ., ಎನ್.ಎಸ್.ಎಸ್ ಘಟಕಾಧಿಕಾರಿ ಡಾ. ಪ್ರಮೋದ್ ಪಿ. ಎ., ಕಛೇರಿ ಅಧೀಕ್ಷಕರಾದ ಚಂದ್ರಕುಮಾರ್ ಕುತ್ಯಾಳ, ಹಾಗೂ ಸಂಸ್ಥೆಯ ಬೋಧಕ, ಬೋಧಕೇತರ ಸಿಬ್ಬಂದಿ ವರ್ಗ, ಪದವಿ ವಿದ್ಯಾರ್ಥಿಗಳು, ಸ್ನಾತಕೋತ್ತರ ವಿಭಾಗದ ವಿದ್ಯಾರ್ಥಿಗಳು, ಕಲಿಕಾ ವೈದ್ಯರುಗಳು ಹಾಗೂ ಎನ್. ಎಸ್. ಎಸ್. ವಿದ್ಯಾರ್ಥಿಗಳು ಉಪಸ್ಥಿತರಿದ್ದರು.