ದೇವರಕೊಲ್ಲಿ ಬಸ್ ಅಪಘಾತ ಪ್ರಕರಣ : ಗಂಭೀರ ಗಾಯಗೊಂಡಿದ್ದ ಪಾದಾಚಾರಿ ಮೃತ್ಯು

Advt_Headding_Middle
Advt_Headding_Middle

ಕೊಯನಾಡು ಸಮೀಪದ ದೇವರಕೊಲ್ಲಿ ಎಂಬಲ್ಲಿ ನಿನ್ನೆ ಸಂಜೆ ಸಂಭವಿಸಿದ ಸರಕಾರಿ ಬಸ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಪಾದಾಚಾರಿಯೋರ್ವರು ಇಂದು ಮುಂಜಾನೆ ಸುಳ್ಯ ಸರಕಾರಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ.


ದೇವರಕೊಲ್ಲಿಯ ವಿಜಯ ಎಂಬವರು ಈ ಬಸ್ ಬಸ್ ಅಪಘಾತ ಸಂಭವಿಸುವಾಗ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದರು. ಬಸ್ ಅವರ ಮೇಲೆರಗಿ ರಸ್ತೆ ಬದಿಯಲ್ಲಿ ಪಲ್ಟಿಯಾಗಿತ್ತು. ಇದರಿಂದ ಗಂಭೀರವಾಗಿ ಗಾಯಗೊಂಡಿದ್ದ ವಿಜಯ್ ಅವರನ್ನು ಅಂಬ್ಯುಲೆನ್ಸ್ ಮೂಲಕ ಸುಳ್ಯ ಸರಕಾರಿ  ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೆ ಅವರು ಇಂದು ಮುಂಜಾನೆ ಮೃತಪಟ್ಟರು. ಬಸ್‌ನಲ್ಲಿದ್ದ ಪ್ರಯಾಣಿಕರಿಗೂ ಗಾಯಗಳಾಗಿವೆ ಎಂದು ತಿಳಿದುಬಂದಿದೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.