Breaking News

ತೊಡಿಕಾನ ಮುಗಿಯದ ನೆಟ್ವರ್ಕ್ ಸಮಸ್ಯೆ – ಗ್ರಾಮಸ್ಥರಿಂದ ಮನವಿ

Advt_Headding_Middle
Advt_Headding_Middle

ತೊಡಿಕಾನ ಗ್ರಾಮದಲ್ಲಿ ನೆಟ್ವರ್ಕ್ ಸಮಸ್ಯೆ ಇದ್ದು ಬಿಎಸ್‌ಎನ್‌ಎಲ್ ಇದ್ದರೂ ಊಟಕ್ಕಿಲ್ಲದ ಉಪ್ಪಿನಕಾಯಿ ಯಂತಾಗಿದೆ ವಿದ್ಯಾರ್ಥಿಗಳಿಗೆ ಆನ್ಲೈನ್ ತರಗತಿಗಳು ಇರುವುದರಿಂದ ನೆಟ್ವರ್ಕ್ ಸಮಸ್ಯೆ ಯಿಂದ ಅನೇಕ ವಿದ್ಯಾರ್ಥಿಗಳು ತುಂಬಾ ತೊಂದರೆಯನ್ನು ಅನುಭವಿಸುತ್ತಿದ್ದಾರೆ.
ಶ್ರೀ ಮಲ್ಲಿಕಾರ್ಜುನ ದೇವಸ್ಥಾನ ಇತಿಹಾಸ ಪ್ರಸಿದ್ಧವಾಗಿದ್ದು ಪ್ರತಿದಿನ ನೂರಾರು ಭಕ್ತಾದಿಗಳು ಆಗಮಿಸುತ್ತಾರೆ. ಇಲ್ಲಿಗೆ ಬರುವ ಭಕ್ತಾದಿಗಳಿಗೆ ಹಾಗೂ ಊರವರಿಗೆ ಕೂಡ ನೆಟ್ವರ್ಕ್ ಸಮಸ್ಯೆಯನ್ನುಂಟುಮಾಡಿದೆ. ವಿಜಯ ಬ್ಯಾಂಕ್, ಅಂಚೆ ಕಛೇರಿ ಹಾಗೂ ಸರಕಾರಿ ಶಾಲೆ ಇದ್ದು ಇವರೆಲ್ಲರೂ ಈ ಸಮಸ್ಯೆ ಹೊರತಾಗಿಲ್ಲ. ಈ ಹಿಂದೆ ಅನೇಕ ಬಾರಿ ಏರ್‌ಟೆಲ್ ಟವರ್ ಮಾಡುವಂತೆ ವಿನಂತಿ ಮಾಡಿಕೊಂಡಿದ್ದರೂ ಯಾವುದೇ ಸೂಕ್ತ ಪ್ರತಿಕ್ರಿಯೆ ಬಂದಿರುವುದಿಲ್ಲ. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕಾಗಿ ಗ್ರಾಮಸ್ಥರು ಸುಳ್ಯ ಏರ್‌ಟೆಲ್ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿದೆ ಎಂದು ತಿಳಿದುಬಂದಿದೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.