Breaking News

ಸುಳ್ಯ ನಗರ ಪಂಚಾಯತ್ ಕಾರು ಚಾಲಕ ಖಾಲಿದ್ ನಿಧನ

Advt_Headding_Middle
Advt_Headding_Middle

 

ಸುಳ್ಯ ನಗರ ಪಂಚಾಯತ್ ನಲ್ಲಿ ಕಾರು ಚಾಲಕರಾಗಿ ದುಡಿಯುತ್ತಿದ್ದ ಖಾಲಿದ್ ರವರು ಮಂಗಳೂರು ಆಸ್ಪತ್ರೆಯಲ್ಲಿ ನಿಧನರಾದರು.

ಸುಳ್ಯ ಗಾಂಧಿನಗರ – ನಾವೂರು ನಿವಾಸಿಯಾಗಿರುವ ಇವರು ಕಳೆದ ಎರಡು ವರ್ಷಕ್ಕೂ ಹೆಚ್ಚು ಕಾಲ ಕಾರು ಚಾಲಕರಾಗಿ ಸೇವೆ ಸಲ್ಲಿಸುತ್ತಿದ್ದರು. ಅಸೌಖ್ಯದ ಕಾರಣ ಸುಳ್ಯ ಆಸ್ಪತ್ರೆಯಲ್ಲಿ ಒಳ ರೋಗಿಯಾಗಿದ್ದ ಅವರು ಬಳಿಕ ಮೂರ್ನಾಲ್ಕು ದಿನದ ಹಿಂದೆ ವೈದ್ಯರ ಸಲಹೆ ಮೇರೆಗೆ ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಅಲ್ಲಿ ಅವರು ಕೊನೆಯಿಸಿರೆಳೆದರೆಂದು ತಿಳಿದು ಬಂದಿದೆ. ಅವರು ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದರೆಂದು ಹೇಳಲಾಗಿದೆ.

ಕೊರೊನಾ ಪಾಸಿಟಿವ್ : ಮಂಗಳೂರಿನಲ್ಲಿ ಕೊರೊನಾ ಪರೀಕ್ಷೆ ನಡೆಸಿದ್ದು ಅದರ ವರದಿ ಪಾಸಿಟಿವ್ ಆಗಿದೆ ಎಂದು ತಿಳಿದು ಬಂದಿದೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.