Breaking News

ಲಿಂಗಪ್ಪ ಬೆಳ್ಳಾರೆಗೆ ಪ್ರೌಢ ಶಾಲಾ ಶಿಕ್ಷಕರಾಗಿ ಪದೋನ್ನತಿ

Advt_Headding_Middle
Advt_Headding_Middle

ಸುಳ್ಯ ಕ್ಷೇತ್ರ ಸಂಪನ್ಮೂಲ ಕೇಂದ್ರದಲ್ಲಿ ಕ್ಷೇತ್ರ ಸಂಪನ್ಮೂಲ ವ್ಯಕ್ತಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಲಿಂಗಪ್ಪ ಬೆಳ್ಳಾರೆಯವರು ಸರಕಾರಿ ಪ್ರೌಢಶಾಲೆ ಎಣ್ಮೂರಿಗೆ ಆಂಗ್ಲಭಾಷಾ ಶಿಕ್ಷಕರಾಗಿ ಪದೋನ್ನತಿ ಹೊಂದಿದ್ದಾರೆ.

ಭಾರತ್ ಸ್ಕೌಟ್ಸ್ & ಗೈಡ್ಸ್ , ಯಕ್ಷಗಾನ ಕ್ರೀಡೆ ಹೀಗೆ ಹಲವಾರು ಕ್ಷೇತ್ರಗಳಲ್ಲಿ ಸಕ್ರಿಯವಾಗಿ ತೊಡಗಿಕೊಂಡ ಕ್ರಿಯಾಶೀಲ ವ್ಯಕ್ತಿತ್ವ ಇವರದು.
ಜನ ಮೆಚ್ಚಿದ ಶಿಕ್ಷಕ ಪ್ರಶಸ್ತಿ, ಜೇಸಿ ಕಮಲ ಪತ್ರಗಳಂತಹ ಪುರಸ್ಕಾರಗಳೊಂದಿಗೆ ಹಲವಾರು ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾರೆ. ಶಿಕ್ಷಕರ ಯಕ್ಷಗಾನ ಒಕ್ಕೂಟದ ಅಧ್ಯಕ್ಷರಾಗಿ, ಯಕ್ಷಕಲಾ ಬೋಧಿನಿ ಬೆಳ್ಳಾರೆ ತಂಡದ ಸಂಚಾಲಕರಾಗಿ, ಸುಳ್ಯ ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ಕಾರ್ಯದರ್ಶಿಯಾಗಿ, ಜೆಸಿ ತರಬೇತುದಾರರಾಗಿ ಗುರುತಿಸಿಕೊಂಡ ಇವರು ಹಲವಾರು ಶೈಕ್ಷಣಿಕ ಕಾರ್ಯಗಳಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ತೊಡಗಿಕೊಂಡಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.