Breaking News

ಸೆಪ್ಟೆಂಬರ್ 12 ರಂದು ಅರಂತೋಡಿನಲ್ಲಿ ತೆಕ್ಕಿಲ್ ಎಕ್ಸಲೆನ್ಸ್ ಅವಾರ್ಡ್ ಸಮರ್ಪಣೆ

Advt_Headding_Middle
Advt_Headding_Middle

ದ.ಕ.ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ವಿಜೇತ ತೆಕ್ಕಿಲ್ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನ ಅರಂತೋಡು ಇದರ ವತಿಯಿಂದ ನೀಡಲಾಗುವ ತೆಕ್ಕಿಲ್ ಎಕ್ಸಲೆನ್ಸ್ ಅವಾರ್ಡ್ ಸಮರ್ಪಣಾ ಕಾರ್ಯಕ್ರಮವು ಸೆ.12ರಂದು ನಡೆಯಲಿದೆ.

2019 ನೇ ಸಾಲಿನ ಎಕ್ಸಲೆನ್ಸ್ ಅವಾರ್ಡನ್ನು ಪತ್ರಿಕಾರಂಗದಲ್ಲಿ ಅವಿರತ ಸೇವೆ ಸಲ್ಲಿಸಿದ ಕೇರಳ ರಾಜ್ಯದ ಮಾದ್ಯಮ ಪತ್ರಿಕೆಯ ಮುಖ್ಯ ವರದಿಗಾರರು ಮತ್ತು ಯುನೆಸೆಫ್ ಪ್ರಶಸ್ತಿ ವಿಜೇತರಾದ ರವೀಂದ್ರನ್ ರಾವನೇಶ್ವರನ್ ಅವರಿಗೆ ನೀಡಲಾಗುವುದು.
ಅರಂತೋಡು ತೆಕ್ಕಿಲ್ ಸಮುದಾಯ ಭವನದಲ್ಲಿ ನಡೆಯುವ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಕೇಂದ್ರ ಸರಕಾರದ ನೆಹರು ಯುವ ಕೇಂದ್ರದ ಮಾಜಿ ಮಹಾ ನಿರ್ದೇಶಕರು ಹಾಗೂ ಕರ್ನಾಟಕ ಪ್ರದೇಶ ಕಾಂಗ್ರೇಸ್ ಸಮಿತಿಯ ಕಾರ್ಯಧ್ಯಕ್ಷ ರಾದ ಸಲೀಮ್ ಅಹಮದ್ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಎಸ್.ಎಸ್.ಎಲ್.ಸಿ.ಮತ್ತು ಪಿಯುಸಿ ಯಲ್ಲಿ ತಾಲೂಕಿನಲ್ಲಿ ಪ್ರಥಮ ಮತ್ತು ದ್ವಿತೀಯ ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಮತ್ತು ತೆಕ್ಕಿಲ್ ಶಾಲೆಯ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯಲ್ಲಿ ಗರಿಷ್ಠ ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಕರ್ನಾಟಕ ಸರಕಾರದ ವಿಧಾನ ಪರಿಷತ್ತಿನ ವಿರೋದ ಪಕ್ಷದ ಮುಖ್ಯ ಸಚೆತಕರಾದ ಎಂ. ನಾರಾಯಣ ಸ್ವಾಮಿ ಸನ್ಮಾನಿಸಲಿದ್ದಾರೆ. ಸಮಾರಂಭದ ಅಧ್ಯಕ್ಷತೆಯನ್ನು ತೆಕ್ಕಿಲ್ ಪ್ರತಿಷ್ಠಾನದ ಅಧ್ಯಕ್ಷ ಟಿ.ಎಂ.ಶಾಹೀದ್ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್, ತಾಲೂಕು ಪಂಚಾಯತ್ ಉಪಾಧ್ಯಕ್ಷೆ ಪುಷ್ಪಮೇದಪ್ಪ, ಸುಳ್ಯ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಜಯಪ್ರಕಾಶ್ ರೈ, ರಾಷ್ಟ್ರ ಪ್ರಶಸ್ತಿ ವಿಜೇತ ಶಿಕ್ಷಕ ಕೆ,ಆರ್.ಗಂಗಾಧರ್ , ಅರಂತೋಡು-ತೊಡಿಕಾನ ವ್ಯವಸಾಯ ಸೇವ ಸಹಕಾರಿ ಸಂಘದ ಅಧ್ಯಕ್ಷ ಸಂತೋಷ್ ಕುತ್ತಮೊಟ್ಟೆ, ಸುಳ್ಯ ವರ್ತಕರ ಸಂಘದ ಅಧ್ಯಕ್ಷ ಪಿ.ಬಿ.ಸುಧಾಕರ.ರೈ, ಸಂಪಾಜೆ ಲಯನ್ಸ್ ಕ್ಲಬ್ ಅಧ್ಯಕ್ಷ ವಾಸುದೇವ ಕಟ್ಟಮನೆ, ಅರಂತೋಡು ಪಂಚಾಯತ್ ನ ಮಾಜಿ ಉಪಾಧ್ಯಕ್ಷ ಶಿವಾನಂದ ಕುಕ್ಕುಂಬಳ, ತೆಕ್ಕಿಲ್ ಶಾಲಾ ಮುಖ್ಯೋಪದ್ಯಾಯ ದಾಮೋಧರ್ ಮಾಸ್ತರ್,ಪಠೇಲ್ ಚಾರಿಟೇಬಲ್ ಅಧ್ಯಕ್ಷ ಬದುರುದ್ದೀನ್ ಮೊದಲಾದವರು ಭಾಗವಹಿಸಲಿದ್ದಾರೆ ಎಂದು ತೆಕ್ಕಿಲ್ ಪ್ರತಿಷ್ಠಾನ ಕಾರ್ಯದರ್ಶಿ ಅಶ್ರಫ್ ಗುಂಡಿ ಮತ್ತು ಕೋಶಾಧಿಕಾರಿ ಟಿ.ಎಂ.ಜಾವೇದ್ ತೆಕ್ಕಿಲ್  ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿರುತ್ತಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.