Breaking News

ಜಾಲ್ಸೂರು : ಪೋಷಣ್ ಅಭಿಯಾನ್ ಮಾಸಾಚರಣೆ

Advt_Headding_Middle
Advt_Headding_Middle

 

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಾಲ್ಸೂರು ಗ್ರಾಮ ಪಂಚಾಯತ್ ಸಂಯುಕ್ತ ಆಶ್ರಯದಲ್ಲಿ ಜಾಲ್ಸೂರು ಗ್ರಾ.ಪಂ. ಸಭಾಭವನದಲ್ಲಿ ಪೋಷಣ್ ಅಭಿಯಾನ್ ಮಾಸಾಚರಣೆ ಮತ್ತು ಪೌಷ್ಠಿಕ ಆಹಾರ ಸಪ್ತಾಹ ಕಾರ್ಯಕ್ರಮ ಸೆ.14ರಂದು ನಡೆಯಿತು.
ಜಾಲ್ಸೂರು ಪಂಚಾಯತ್ ಆಡಳಿತಾಧಿಕಾರಿ ಶ್ರೀಮತಿ ವೀಣಾ ಅಧ್ಯಕ್ಷತೆ ವಹಿಸಿದ್ದರು. ತಾ.ಪಂ.ಸದಸ್ಯ ತೀರ್ಥರಾಮ ಜಾಲ್ಸೂರು ಕಾರ್ಯಕ್ರಮ ಉದ್ಘಾಟಿಸಿದರು.

ಅಂಗನವಾಡಿ ಮೇಲ್ವಿಚಾರಕಿ ಶ್ರೀಮತಿ ಉಷಾ ಪ್ರಸಾದ್ ರೈಯವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಆರೋಗ್ಯ ಸಹಾಯಕಿ ಶ್ರೀಮತಿ ಜಲಜಾಕ್ಷಿಯವರು ಚುಚ್ಚುಮದ್ದು ಮತ್ತು ಮಹಿಳೆಯರ ಆರೋಗ್ಯದ ಬಗ್ಗೆ ಮಾಹಿತಿ ನೀಡಿದರು. ಶ್ರೀ ವಿಷ್ಣು ಸ್ತ್ರೀ ಶಕ್ತಿ ಗೊಂಚಲು ಇದರ ಅಧ್ಯಕ್ಷೆ ಶ್ರೀಮತಿ ತಿರುಮಲೇಶ್ವರಿ, ಸ್ಕಂದ ಮಹಿಳಾ ಮಂಡಲದ ಅಧ್ಯಕ್ಷೆ ಶ್ರೀಮತಿ ಗೀತಾ ಗೋಪಿನಾಥ್ ಬೊಳುಬೈಲು, ತಾಲೂಕು ಬ್ಲಾಕ್ ಸೊಸೈಟಿ ಕಾರ್ಯದರ್ಶಿ ಪ್ರಸನ್ನ ಕುಮಾರಿಯವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಪೌಷ್ಠಿಕ ಆಹಾರ, ಪೋಷಣ್ ಬಗ್ಗೆ ಮಾಹಿತಿ ನೀಡಲಾಯಿತು. ಪೌಷ್ಢಿಕ ಆಹಾರ ತಯಾರಿಸಿದವರಿಗೆ, ಗಿಡಗಳನ್ನು ಬಹುಮಾನ ನೀಡಲಾಯಿತು.
ಕೋನಡ್ಕಪದವು ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ನಿವೇದಿತಾ ಕಾರ್ಯಕ್ರಮ ನಿರೂಪಿಸಿ, ಶ್ರೀಮತಿ ಸುಮಂಗಲಿ ಪ್ರಾರ್ಥಿಸಿದರು. ಕದಿಕಡ್ಕ ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ಗಿರಿಜಾ ಸ್ವಾಗತಿಸಿ, ಬೊಳುಬೈಲು ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ಬೇಬಿ ಕುಮಾರಿ ವಂದಿಸಿದರು. ಸೋಣಂಗೇರಿ ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ರವಿಕಲ, ಮರಸಂಕ ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ರತಿ, ಕುಕ್ಕಂದೂರು ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ಸುಮಲತಾ ಇವರು ಸಹಕರಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.