ಮಣಿಕ್ಕಾರ ಗೋಪಾಲಕೃಷ್ಣ ಶ್ಯಾನುಬಾಗ್‌ರಿಗೆ ಗಾಂಧಿ ಸ್ಮೃತಿ ಪ್ರಶಸ್ತಿ

Advt_Headding_Middle
Advt_Headding_Middle

ಅ. 2 ರಂದು ಸುಳ್ಯ ಗಾಂಧಿ ಜಯಂತಿ ಆಚರಣೆಯಲ್ಲಿ ಪ್ರದಾನ

ಯುವಜನ ಸಂಯುಕ್ತ ಮಂಡಳಿ-ಯುವಜನ ಸೇವಾ ಸಂಸ್ಥೆಯಿಂದ ಆಯೋಜನೆ

ಸುಳ್ಯದ ಯುವಜನ ಸಂಯುಕ್ತ ಮಂಡಳಿ ಹಾಗೂ ಯುವಜನ ಸೇವಾ ಸಂಸ್ಥೆ ಇವುಗಳ ಆಶ್ರಯದಲ್ಲಿ ಅ.2 ರಂದು ಸುಳ್ಯ ಯುವಜನ ಸಂಯುಕ್ತ ಮಂಡಳಿಯಲ್ಲಿ ಆಯೋಜಿಸಲಾಗಿರುವ ಮಹಾತ್ಮ ಗಾಂಧೀಜಿಯವರ 151 ನೇ ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಬೆಳ್ಳಾರೆಯ ಮಣಿಕ್ಕಾರ ಗೋಪಾಲಕೃಷ್ಣ ಶ್ಯಾನುಬಾಗ್‌ರಿಗೆ ಗಾಂಧಿ ಸ್ಮತಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಯುವಜನ ಸೇವಾ ಸಂಸ್ಥೆ ಅಧ್ಯಕ್ಷ ದೀಪಕ್ ಕುತ್ತಮೊಟ್ಟೆ ತಿಳಿಸಿದರು.


ಸೆ.26ರಂದು ಯುವಜನ ಸಂಯುಕ್ತ ಮಂಡಳಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು “ಅ.2ರಂದು ಗಾಂಧೀಜಿಯವರ ಜನ್ಮಾದಿನಾಚರಣೆ ಜತೆಗೆ ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಯುವಜನ ಸೇವಾ ಸಂಸ್ಥೆಯನ್ನು ಉದ್ಘಾಟಿಸಿ ಆ ಮೂಲಕ ಯುವಜನ ಚಟುವಟಿಕೆಗಳಿಗೆ ಚಾಲನೆ ನೀಡಲಾಗುತ್ತಿದೆ. ಸಂಸ್ಥೆಯ ವತಿಯಿಂದ ಗಾಂಧಿಸ್ಮತಿ ಪ್ರಶಸ್ತಿಯನ್ನು ನೀಡಲು ನಿರ್ಧರಿಸಲಾಗಿದ್ದು ಈ ಬಾರಿ ಕೃಷಿ, ಸಾಹಿತ್ಯ, ಧಾರ್ಮಿಕ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವ ಗಾಂಧೀಜಿಯವರ ಚಿಂತನೆಗಳನ್ನು ಅಳವಡಿಸಿಕೊಂಡಿರುವ ಬೆಳ್ಳಾರೆಯ ಮಣಿಕ್ಕಾರ ಗೋಪಾಲಕೃಷ್ಣ ಶ್ಯಾನುಬಾಗ್‌ರನ್ನು ಆಯ್ಕೆ ಮಾಡಿರುವುದಾಗಿ ಅವರು ತಿಳಿಸಿದರು.


ಸಮಾರಂಭದಲ್ಲಿ ಯುವಜನ ಸೇವಾ ಸಂಸ್ಥೆಯ ಅಧ್ಯಕ್ಷ ದೀಪಕ್ ಕುತ್ತಮೊಟ್ಟೆ ಅಧ್ಯಕ್ಷತೆ ವಹಿಸಲಿದ್ದು, ಶಾಸಕ ಎಸ್.ಅಂಗಾರ ದೀಪ ಪ್ರಜ್ವಲನೆ ಮಾಡಿ, ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಉಪ್ಪಿನಂಗಡಿ ಸ.ಪ್ರ.ದರ್ಜೆ ಕಾಲೇಜಿನ ಪ್ರಾಂಶುಪಾಲ ಪ್ರೊ.ಸುಬ್ಬಪ್ಪ ಕೈಕಂಬ ಗಾಂಧೀಜಿಯವರ ಸ್ವರಾಜ್ಯ ಚಿಂತನೆ ಎಂಬ ವಿಷಯದಲ್ಲಿ ಮಾತನಾಡಲಿದ್ದಾರೆ. ಸಾರಂಭದಲ್ಲಿ ಶ್ರೀಮತಿ ರಮ್ಯಾ ದಿಲೀಪ್ ಬಾಬ್ಲುಬೆಟ್ಟು ಮತ್ತು ತಂಡದಿಂದ ಮೀರಾಭಜನೆ ಪ್ರಸ್ತುತಿ ಯಾಗಲಿದೆ ಎಂದು ಅವರು ವಿವರ ನೀಡಿದರು.


ಯುವಜನ ಸಂಸ್ಥೆ ಆರಂಭ
ಸುಳ್ಯದಲ್ಲಿ ಹಿರಿಯರು ಕಟ್ಟಿರುವ ಸಂಸ್ಥೆಯ ಮೂಲಕ ಮುಂದಿನ ದಿನಗಳಲ್ಲಿ ಯುವಜನ ಚಟುವಟಿಕೆಗಳನ್ನು ಹಮ್ಮಿಕೊಳ್ಳಲು ನಿರ್ಧರಿಸಿದ್ದು, ಇದರ ಭಾಗವಾಗಿ ಯುವಜನ ಸೇವಾ ಸಂಸ್ಥೆಯನ್ನು ಹುಟ್ಟು ಹಾಕಲಾಗಿದೆ. ಸಂಸ್ಥೆಯ ಪೂರ್ವಾಧ್ಯಕ್ಷರಿರುವ ಈ ಸಂಸ್ಥೆಯ ಉzಶವೆಂದರೆ ಇದರ ಆಸ್ತಿ, ಕಟ್ಟಡ ನಿರ್ವಹಣೆ ಮತ್ತು ಅಭಿವೃದ್ಧಿ ಮಾಡುವುದು ಮತ್ತು ಯುವಜನ ಸಂಯುಕ್ತ ಮಂಡಳಿಯ ಮೂಲಕ ಯುವಜನ ಚಟುವಟಿಕೆಗಳಿಗೆ ಸಹಾಯ ಧನ ನೀಡಿ ಪ್ರೋತ್ಸಾಹಿಸುವುದು. ಈ ಸಂಸ್ಥೆಯ ಮೂಲಕ ಸೇವಾ ಚಟುವಟಿಕೆಗಳನ್ನು ಆರಂಭಿಸಲಾಗುವುದು. ಯುವಜನ ತರಬೇತಿ ಕೇಂದ್ರ ತೆರೆಯಲಾಗುವುದು. ಸಂಸ್ಥೆಯನ್ನು ನೋಂದಾಯಿಸಲಾಗಿದ್ದು ಸಂಸ್ಥೆಗೆ ರೂ.1೦೦೦ ಅಜೀವ ಸದಸ್ಯತ್ವ ಮತ್ತು ರೂ. 1೦,೦೦೦ ನೀಡಿ ಗೌರವ ಸದಸ್ಯತ್ವವನ್ನು ಶಾಶ್ವತವಾಗಿ ಪಡೆಯಬಹುದು ಎಂದು ಸಂಸ್ಥೆಯ ಗೌರವ ಸಲಹೆಗಾರ ದಿನೇಶ್ ಮಡಪ್ಪಾಡಿ ಮಾಹಿತಿ ನೀಡಿದರು.
ಪತ್ರಿಕಾಗೋಷ್ಠಿಯಲ್ಲಿ ಯುವಜನ ಸಂಯುಕ್ತ ಮಂಡಳಿ ಅಧ್ಯಕ್ಷ ಅನಿಲ್ ಪೂಜಾರಿ ಮನೆ, ಕಾರ್ಯದರ್ಶಿ ರಾಜೀವಿ ಲಾವಂತಡ್ಕ, ಕೋಶಾಧಿಕಾರಿ ವಿಜಯಕುಮಾರ್ ಉಬರಡ್ಕ, ಗೌರವಾಧ್ಯಕ್ಷ ಶಂಕರ ಪೆರಾಜೆ, ಯುವಜನ ಸಂಸ್ಥೆ ಕಾರ್ಯದರ್ಶಿ ಆರ್.ಕೆ.ಮಹಮ್ಮದ್, ಯುವಜನ ಸಂಯುಕ್ತ ಮಂಡಳಿ ನಿರ್ದೇಶಕರಾದ ವಿನುತಾ ಪಾತಿಕಲ್ಲು, ಕಾರ್ತಿಕ್ ರೈ ಕಲ್ಲೇರಿ ಇದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.