ಬೆಳ್ಳಾರೆ ಕರ್ನಾಟಕ ಪಬ್ಲಿಕ್ ಸ್ಕೂಲ್ ನ ವಿಸ್ತೃತ ಕಟ್ಟಡ ಉದ್ಘಾಟನೆ

Advt_Headding_Middle
Advt_Headding_Middle

ಗುಣಮಟ್ಟದ ಶಿಕ್ಷಣಕ್ಕೆ ಸರಕಾರದಿಂದ ಪ್ರೋತ್ಸಾಹ :  ಮೀನಾಕ್ಷಿ ಶಾಂತಿಗೋಡು

ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಪದವಿ ಪೂರ್ವ ಶಿಕ್ಷಣ ಇಲಾಖೆ ಕರ್ನಾಟಕ ಪಬ್ಲಿಕ್ ಸ್ಕೂಲ್ ಬೆಳ್ಳಾರೆ ಅರ್.ಐ.ಡಿ.ಎಫ್ ನಬಾರ್ಡ್ 25 ಯೋಜನೆಯಡಿ ರೂ.119 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ಕಾಲೇಜಿನ ವಿಸ್ತೃತ ಕಟ್ಟಡದ ಉದ್ಘಾಟನಾ ಸಮಾರಂಭವು ಅ.01 ರಂದು ನಡೆಯಿತು.
ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಮೀನಾಕ್ಷಿ ಶಾಂತಿಗೋಡು ವಿಸ್ತೃತ ಕಟ್ಟಡವನ್ನು ಉದ್ಘಾಟಿಸಿದರು.
ಶಾಸಕ ಎಸ್.ಅಂಗಾರ ನಾಮಫಲಕ ಅನಾವರಣಗೊಳಿಸಿದರು.
ಬಳಿಕ ನಡೆದ ಸಭಾಕಾರ್ಯಕ್ರಮದಲ್ಲಿ ಶಾಸಕ ಎಸ್.ಅಂಗಾರ ಸಭಾಧ್ಯಕ್ಷತೆ ವಹಿಸಿ ಮಾತನಾಡಿದರು.
ಕಟ್ಟಡದ ಕಾಂಟ್ರಾಕ್ಟರ್ ಅಬ್ದುಲ್ ರಜಾಕ್ ರವರನ್ನು ಶಾಸಕರು ಕಾಲೇಜು ವತಿಯಿಂದ ಸನ್ಮಾನಿಸಿದರು.
ವೇದಿಕೆಯಲ್ಲಿ ತಾಲೂಕು ಪಂಚಾಯತ್ ಅಧ್ಯಕ್ಷ ಚನಿಯ ಕಲ್ತಡ್ಕ,ಜಿಲ್ಲಾ ಪಂಚಾಯತ್ ಸದಸ್ಯ ಎಸ್.ಎನ್.ಮನ್ಮಥ,ಗೌರವ ಉಪಸ್ಥಿತರಾಗಿ ಪ.ಪೂ.ಶಿಕ್ಷಣ ಇಲಾಖೆಯ ಉಪನಿರ್ದೇಶಕ ಮಹಮ್ಮದ್ ಇಮ್ತಿಯಾಜ್ ಹೆಚ್.ಕೆ,ಕ್ಷೇತ್ರ ಶಿಕ್ಷಣಾಧಿಕಾರಿ ಮಹದೇವ ಎಸ್.ಪಿ,ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯಪಾಲಕ ಸಣ್ಣೇ ಗೌಡ,ಬೆಳ್ಳಾರೆ ಗ್ರಾ.ಪಂ.ಆಡಳಿತಾಧಿಕಾರಿ ಹನುಮಂತರಾಯಪ್ಪ,ಸರ್ಕಾರಿ ನೌಕರರ ಸಂಘದ ಕರ್ನಾಟಕ ರಾಜ್ಯ ಪರಿಷತ್ ಸದಸ್ಯ ಪೃಥ್ವಿ ಕುಮಾರ್ , ಕಾಲೇಜಿನ ಉಪಪ್ರಾಂಶುಪಾಲರಾದ ಶ್ರೀಮತಿ ಉಮಾ ಕುಮಾರಿ,ಮುಖ್ಯ ಶಿಕ್ಷಕ ಮಾಯಿಲಪ್ಪ ಪಿ.,ಶಾಲಾ ಎಸ್.ಡಿ.ಎಂ.ಸಿ ಕಾರ್ಯಾಧ್ಯಕ್ಷ ಶಾಂತಾರಾಮ ಕಣಿಲೆಗುಂಡಿ,ಸಿ.ಬಿ.ಸಿಯ ಕಾರ್ಯಾಧ್ಯಕ್ಷ ಬಾಲಪ್ಪ,ಪ್ರಾ.ಶಾಲಾ.ಎಸ್.ಡಿ.ಎಂ.ಸಿ ಅಧ್ಯಕ್ಷ ಕೇಶವ ನಾಯಕ್ ಉಪಸ್ಥಿತರಿದ್ದರು.

ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ಹಸೀನಾಭಾನು ಸ್ವಾಗತಿಸಿ ಪ್ರಾಸ್ತಾವಿಕ ಮಾತನಾಡಿದರು.
ಶಾಂಭವಿ ಮತ್ತು ಚಂದನಲಕ್ಷ್ಮಿ ಪ್ರಾರ್ಥಿಸಿದರು.ಶಿಕ್ಷಕ ರಾಮಚಂದ್ರ ಭಟ್ ಕಾರ್ಯಕ್ರಮ ನಿರೂಪಿಸಿ, ಕಾಲೇಜಿನ ಉಪಪ್ರಾಂಶುಪಾಲರಾದ ಶ್ರೀಮತಿ ಉಮಾಕುಮಾರಿ ವಂದಿಸಿದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.