ಮಂಗಳೂರಿನಲ್ಲಿ ತೇಲುವ ನೌಕೆಯಲ್ಲಿ ನಡೆದ ವಿಶೇಷ ಕಾರ್ಯಕ್ರಮ
ಪತ್ರಕರ್ತ ಜಯಪ್ರಕಾಶ್ ಕುಕ್ಕೇಟಿಯವರಿಗೆ ಸನ್ಮಾನ
ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಜಿಲ್ಲಾ ಸಮಿತಿ ವತಿಯಿಂದ ರಾಷ್ಟ್ರೀಯ ಪತ್ರಿಕಾ ದಿನಾಚರಣೆ ಮಂಗಳೂರು ಬೊಕ್ಕಪಟ್ಣ ರಾಣಿ ಅಬ್ಬಕ್ಕ ತೇಲುವ ನೌಕೆಯಲ್ಲಿ ವಿಶಿಷ್ಟ ಪೂರ್ಣವಾಗಿ ನಡೆಯಿತು.
ದ.ಕ.ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.
ಯೂನಿಯನ್ ರಾಜ್ಯಾಧ್ಯಕ್ಷ ನಾರಾಯಣ್ ಹಾಗೂ ಯೂನಿಯನ್ ಪದಾಧಿಕಾರಿಗಳು ಉಪಸ್ಥಿತರಿದ್ದರು .ಕರ್ನಾಟಕ ಜರ್ನಲಿಸ್ಟ್ ಜಿಲ್ಲಾ ಯೂನಿಯನ್ ಅಧ್ಯಕ್ಷ ಹರೀಶ್ ಬಂಟ್ವಾಳ್ ಅಧ್ಯಕ್ಷತೆ ವಹಿಸಿದ್ದರು.
ಡಾ.ಚಂದ್ರ ಪೂಜಾರಿ ವಿಶೇಷ ಉಪನ್ಯಾಸ ನೀಡಿದರು.
ಈ ಸಂದರ್ಭದಲ್ಲಿ ಮಾಧ್ಯಮ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸುಳ್ಯದ ಜಯಪ್ರಕಾಶ್ ಕುಕ್ಕೇಟಿ ಸೇರಿದಂತೆ ಹಲವು ಮಂದಿಯನ್ನು ಸನ್ಮಾನಿಸಲಾಯಿತು.