ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜು, ಸುಳ್ಯ ಇಲ್ಲಿ 2020-21 ನೇ ಸಾಲಿನ ಎಂ.ಬಿ.ಎ. ಮತ್ತು ಎಂ.ಟೆಕ್ ಕೋರ್ಸುಗಳಿಗೆ ದಾಖಲಾತಿ ಪ್ರಾರಂಭವಾಗಿದೆ. ಸರಕಾರ ನಿಗದಿಪಡಿಸಿದ PGCET ಅಥವಾ KMAT ಪ್ರವೇಶ ಪರೀಕ್ಷೆ 2020-21 ಕಡ್ಡಾಯವಾಗಿ ಬರೆಯತಕ್ಕದು. KMAT ಪರೀಕ್ಷೆಗೆ ಅರ್ಜಿ ಸಲ್ಲಿಸಲು 06-12-2020 ಕೊನೆಯ ದಿನಾಂಕವಾಗಿರುತ್ತದೆ.
ಎಂ.ಬಿ.ಎ. ಕೋರ್ಸಿಗೆ ಪ್ರವೇಶ ಬಯಸುವ ವಿದ್ಯಾರ್ಥಿಗಳಿಗೆ ಬೋಧನಾ ಶುಲ್ಕದಲ್ಲಿ ಶೇಕಡಾ 20 ರಷ್ಟು ವಿನಾಯಿತಿ ನೀಡಲಾಗುವುದು. ಆಸಕ್ತ ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕಾಗಿ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಇದರ ಪ್ರಧಾನ ಕಾರ್ಯದರ್ಶಿಗಳಾದ ಡಾ. ರೇಣುಕಾ ಪ್ರಸಾದ್ ಕೆ.ವಿ. ಮತ್ತು ಕಾಲೇಜಿನ ಪ್ರಾಂಶುಪಾಲರಾದ ಡಾ. ಎನ್.ಎ. ಜ್ಞಾನೇಶ್ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿ ಮತ್ತು ವಿವರಗಳಿಗಾಗಿ ದೂರವಾಣಿ ಸಂಖ್ಯೆ ೯೭೪೨೧೭೮೨೫೨, ೯೭೪೩೬೭೭೩೪೮, ೯೪೪೯೩೮೭೧೫೦ ಸಂಪರ್ಕಿಸುವುದು.