ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪ್ರತಿನಿಧಿಗಳ ಆಯ್ಕೆಗೆ ಡಿ.6 ರಂದು ಚುನಾವಣೆ ದಿನಾಂಕ ನಿಗದಿಪಡಿಸಲಾಗಿತ್ತು. ಆದರೆ ಇದೀಗ ಮುಂದಿನ ಆದೇಶದವರೆಗೆ ಚುನಾವಣೆ ಮುಂದೂಡುವಂತೆ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯ ಚುನಾವಣಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ತಾಲೂಕು ಸಮಿತಿಗೆ ಡಿ.6ರಂದು ಚುನಾವಣೆ ನಡೆಸುವ ಉದ್ದೇಶದಿಂದ ಸುತ್ತೋಲೆ ಹೊರಡಿಸಲಾಗಿತ್ತು.
ಇದಕ್ಕಾಗಿ ಚುನಾವಣಾಧಿಕಾರಿ ಸಹಿತ ಎಲ್ಲಾ ಸಿದ್ಧತೆ ಮಾಡಿಕೊಂಡು ನ.26ರಿಂದ ನಾಮಪತ್ರ ಸ್ವೀಕಾರವು ಆರಂಭಗೊಂಡಿತ್ತು. ನ.28 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿತ್ತು. ತಾಲೂಕಿನಲ್ಲಿ ಒಟ್ಟು 12 ಮಂದಿ ಶಿಕ್ಷಕರು ನಾಮಪತ್ರವನ್ನು ಸಲ್ಲಿಸಿದ್ದರು. ಆದರೆ ನ.28 ರಂದು ಮಧ್ಯಾಹ್ನ ಚುನಾವಣೆಯನ್ನು ಮುಂದಿನ ಆದೇಶದವರೆಗೆ ತಡೆಹಿಡಿಯುವಂತೆ ರಾಜ್ಯ ಚುನಾವಣಾಧಿಕಾರಿಗಳು ಸುತ್ತೋಲೆ ಹೊರಡಿಸಿರುವುದರಿಂದ ಚುನಾವಣೆ ಪ್ರಕ್ರಿಯೆ ನಿಲ್ಲಿಸಲಾಗಿದೆ ಎಂದು ತಾಲೂಕು ಚುನಾವಣಾಧಿಕಾರಿಯಾಗಿರುವ ಕೇಶವ ಹೊಸಗದ್ದೆಯವರು ಸುದ್ದಿಗೆ ತಿಳಿಸಿದ್ದಾರೆ.