ಶಿಕ್ಷಕರು ಸಹಿತ ಸರಕಾರಿ ನೌಕರರು ಭಾಗವಹಿಸಲು ವಿನಂತಿ
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾಗಿರುವ ಸಿ.ಎಸ್.ಷಡಕ್ಷರಿಯವರು ಡಿ.03 ರಂದು ದ.ಕ. ಜಿಲ್ಲಾ ಸಂಘಕ್ಕೆ ಭೇಟಿ ನೀಡಲಿದ್ದಾರೆ. ಅಂದು ಬೆಳಿಗ್ಗೆ 10.00 ಗಂಟೆಗೆ ದ ಕ ಜಿಲ್ಲಾ ಸಂಘದ ನಂದಿನಿ ಸಭಾಂಗಣದಲ್ಲಿ ರಾಜ್ಯಾಧ್ಯಕ್ಷರ ಸಮ್ಮುಖದಲ್ಲಿನಡೆಯುವ ಶಿಕ್ಷಕರ ಹಾಗೂ ಸರಕಾರಿ ನೌಕರರ ಕುಂದುಕೊರತೆಗಳ ನೇರ ಸಂವಾದ ನಡೆಯಲಿದ್ದು, ಸುಳ್ಯ ತಾಲೂಕಿನಿಂದಲೂ ಹೆಚ್ಚಿನ ಸಂಖ್ಯೆಯಲ್ಲಿ ಸರಕಾರಿ ನೌಕರರು ಭಾಗವಹಿಸುವಂತೆ ತಾಲೂಕು ಸಂಘದ ಅಧ್ಯಕ್ಷ ತೀರ್ಥರಾಮ ಹೊಸೊಳಿಕೆ ಹಾಗೂ ಕಾರ್ಯಕಾರಿ ಸಮಿತಿಯವರು ವಿನಂತಿಸಿದ್ದಾರೆ.