ಗ್ರಾಮ ಪಂಚಾಯತ್ ಚುನಾವಣೆಗೆ ದಿನ ನಿಗದಿಯಾಗಿದ್ದು ಬೆಳ್ಳಾರೆಯ ತಡಗಜೆಯಲ್ಲಿ ಚುನಾವಣಾ ಬಹಿಷ್ಕಾರದ ಬ್ಯಾನರ್ ಗ್ರಾಮಸ್ಥರು ಅಳವಡಿಸಿದ್ದಾರೆ.
ಕಳೆದ 25 ವರ್ಷಗಳಿಂದ ಬೆಳ್ಳಾರೆ ಗ್ರಾಮದ 3 ನೇ ವಾರ್ಡ್ ನಲ್ಲಿ ಯಾವುದೇ ಅಭಿವೃದ್ಧಿ ಕೆಲಸಗಳು ಆಗಲಿಲ್ಲ, ಮೂಲಭೂತ ಸೌಕರ್ಯಗಳಾದ ರಸ್ತೆ,ಕುಡಿಯುವ ನೀರು,ಬೀದಿ ದೀಪದ ವ್ಯವಸ್ಥೆಗಳು ಸರಿಯಾಗಿ ಇಲ್ಲ.
ಜನಪ್ರತಿನಿಧಿಗಳು ಭರವಸೆ ಮಾತ್ರ ಕೊಡುತ್ತಾರೆ.ಸಮಸ್ಯೆಗಳಿಗೆ ಸ್ಪಂದಿಸುವುದಿಲ್ಲ ಎಂದು ಮುಂದಿನ ಗ್ರಾಮ ಪಂಚಾಯತ್ ಚುನಾವಣೆ ಬಹಿಷ್ಕರಿಸುವುದಾಗಿ ನೊಂದ ತಡಗಜೆ ಗ್ರಾಮಸ್ಥರು ಚುನಾವಣಾ ಬಹಿಷ್ಕಾರದ ಬ್ಯಾನರ್ ಅಳವಡಿಸಿದ್ದಾರೆ.