ಜ್ಞಾನದೀಪ ಎಜ್ಯುಕೇಶನಲ್ ಚಾರಿಟೇಬಲ್ ಟ್ರಸ್ಟ್(ರಿ.) ಬೆಳ್ಳಾರೆ ಇದರ ವತಿಯಿಂದ 2020-21ನೇ ಸಾಲಿನಲ್ಲಿ ತಾಲೂಕಿನ ಆರ್ಹ ಬಡ ವಿದ್ಯಾರ್ಥಿನಿಯರಿಗೆ ಸುಳ್ಯದ ಶ್ರೀ ಹರಿ ವಾಣಿಜ್ಯ ಸಂಕೀರ್ಣ ಮತ್ತು ಬೆಳ್ಳಾರೆಯ ಬಸ್ ನಿಲ್ದಾಣದ ಬಳಿ ಕಾರ್ಯನಿರ್ವಹಿಸುತ್ತಿರುವ ಜ್ಞಾನದೀಪ ಶಿಕ್ಷಣ ತರಬೇತಿ ಮತ್ತು ಅಭಿವೃದ್ಧಿ ಸಂಸ್ಥೆಯಲ್ಲಿ ಒಂದು ವರ್ಷದ ಉಚಿತ ಡಿಪ್ಲೊಮಾ ಇನ್ ಕಂಪ್ಯೂಟರ್ ಟೀಚರ್ ಟ್ರೈನಿಂಗ್ ಕೋರ್ಸ್ಗೆ ಅರ್ಜಿ ಆಹ್ವಾನಿಸಲಾಗಿದೆ.
ವಾಣಿಜ್ಯದಲ್ಲಿ ಪದವಿ ಪೂರೈಸಿರುವ ಸುಳ್ಯ ತಾಲೂಕಿನ ಆರ್ಹ ಬಡ ವಿದ್ಯಾರ್ಥಿನಿಯರಿಗೆ ಒಂದು ವರ್ಷ ಉಚಿತವಾಗಿ ಈ ತರಬೇತಿ ನೀಡಿ ಸರಕಾರದ ಮಾನ್ಯತೆಯ ಪ್ರಮಾಣ ಪತ್ರ ನೀಡಲಾಗುತ್ತದೆ. ತರಬೇತಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದವರು ಶಾಲೆ, ಕಾಲೇಜು ಅಥವಾ ಕಂಪ್ಯೂಟರ್ ಶಿಕ್ಷಣ ಸಂಸ್ಥೆಗಳಲ್ಲಿ ಕಂಪ್ಯೂಟರ್ ಶಿಕ್ಷಕಿಯರುಗಳಾಗಿ ಭವಿಷ್ಯ ರೂಪಿಸಿಕೊಳ್ಳಬಹುದಾಗಿದೆ. ಆಸಕ್ತರು ಫೆ.೧೦ರ ಮೊದಲು ತಮ್ಮ ಸ್ವವಿವರಗಳನ್ನು ಒಳಗೊಂಡ ಅರ್ಜಿಯನ್ನು ಆಧಾರ್ ಕಾರ್ಡ್, ರೇಶನ್ ಕಾರ್ಡ್ ಪ್ರತಿಗಳೊಂದಿಗೆ ಅಧ್ಯಕ್ಷರು/ನಿರ್ದೇಶಕರು ಜ್ಞಾನದೀಪ ಎಜ್ಯುಕೇಶನಲ್ ಚಾರಿಟೇಬಲ್ ಟ್ರಸ್ಟ್(ರಿ.) ಶ್ರೀ ದುರ್ಗಾ ಕಾಂಪ್ಲೆಕ್ಸ್, ಬಸ್ ನಿಲ್ದಾಣದ ಎದರು ಬೆಳ್ಳಾರೆ ಸುಳ್ಯ ತಾಲೂಕು ೫೭೪೨೧೨ ಇಲ್ಲಿಗೆ ಸಲ್ಲಿಸಬಹುದು ಎಂದು ಟ್ರಸ್ಟ್ನ ಪ್ರಕಟನೆ ತಿಳಿಸಿದೆ.