ದಿನಾಂಕ ಜನವರಿ 21 ರಂದು ಅರಂತೋಡು-ತೊಡಿಕಾನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಪ್ರತಿಷ್ಟಿತ ಶ್ರೀ ವೆಂಕಟ್ರಮಣ ಕ್ರೆಡಿಟ್ ಕೋ-ಅಪರೇಟಿವ್ ಸಂಘದ ಆಡಳಿತ ಮಂಡಳಿ ಅಧ್ಯಕ್ಷರು, ಮಡಪ್ಪಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾದ ಪಿ.ಸಿ. ಜಯರಾಮರವರು ಶ್ರೀ ವೆಂಕಟ್ರಮಣ ಕ್ರೆಡಿಟ್ ಕೋ-ಅಪರೇಟಿವ್ ಸಂಘದ ನಿರ್ದೇಶಕರಾಗಿರುವ ಪಿ.ಎಸ್. ಗಂಗಾಧರ್ ಮತ್ತು ಕೆವಿಜಿ ಸುಳ್ಯ ಹಬ್ಬ ಸಮಾಜ ಸೇವಾ ಸಂಘ ಇದರ ಕೋಶಾಧಿಕಾರಿಗಳಾದ ದಿನೇಶ್ ಮಡ್ತಿಲ ಭೇಟಿ ನೀಡಿದರು. ಸಂಘದ ಅಧ್ಯಕ್ಷರಾದ ಸಂತೋಷ್ ಕುತ್ತಮೊಟ್ಟೆ, ಮುಖ್ಯಕಾರ್ಯನಿರ್ವಹಣಾಧಿಕಾರಿ ವಾಸುದೇವ ನಾಯಕ್ ನಿರ್ದೇಶಕರಾದ ನಿಧೀಶ್ ಅರಂತೋಡು ಮತ್ತು ಸಿಬ್ಬಂದಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.