ಅಧ್ಯಕ್ಷ – ಸಾಮಾನ್ಯ
ಉಪಾಧ್ಯಕ್ಷ : ಅನುಸೂಚಿತ ಪಂಗಡ ಮಹಿಳೆ
ಕನಕಮಜಲು ಗ್ರಾಮ ಪಂಚಾಯತ್ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಮೀಸಲಾತಿ ನಿಗದಿಯಾಗಿದೆ.
ಅಧ್ಯಕ್ಷ ಸ್ಥಾನ ಸಾಮಾನ್ಯ ಸ್ಥಾನ ಹಾಗೂ ಉಪಾಧ್ಯಕ್ಷ ಸ್ಥಾನ ಅನುಸೂಚಿತ ಪಂಗಡ ಮಹಿಳೆಗೆ ಮೀಸಲಾಗಿದೆ.
ಸಾಮಾನ್ಯ ಸ್ಥಾನದಿಂದ ಬಿಜೆಪಿ ಬೆಂಬಲಿತರಾಗಿ ಗೆಲುವು ಸಾಧಿಸಿರುವ ಮಾಜಿ ಗ್ರಾ.ಪಂ. ಉಪಾಧ್ಯಕ್ಷ ಶ್ರೀಧರ ಕುತ್ಯಾಳ ಹಾಗೂ ರವಿಚಂದ್ರ ಕಾಪಿಲ ಅವರಿಬ್ಬರಲ್ಲಿ ಒಬ್ಬರು ಅಧ್ಯಕ್ಷರಾಗುವುದು ಖಚಿತ. ಉಪಾಧ್ಯಕ್ಷ ಸ್ಥಾನ ಅನುಸೂಚಿತ ಪಂಗಡ ಮಹಿಳೆಗೆ ಮೀಸಲಾಗಿದ್ದು ಈ ಸ್ಥಾನದಿಂದ ಬಿಜೆಪಿ ಬೆಂಬಲಿತರಾಗಿ ಗೆಲುವು ಸಾಧಿಸಿರುವ ಶ್ರೀಮತಿ ದೇವಕಿ ಕುದ್ಕುಳಿ ಉಪಾಧ್ಯಕ್ಷರಾಗುವುದು ಖಚಿತವಾಗಿದೆ.
ಕನಕಮಜಲು ಗ್ರಾಮ ಪಂಚಾಯತಿಯಲ್ಲಿ ಒಟ್ಟು 7 ಸದಸ್ಯ ಸ್ಥಾನಗಳಲ್ಲಿ ಬಿಜೆಪಿ ಬೆಂಬಲಿತರು 5 ಸ್ಥಾನಗಳನ್ನು ಗೆದ್ದುಕೊಳ್ಳುವ ಮೂಲಕ ಅಧಿಕಾರ ಹಿಡಿದಿದ್ದಾರೆ.