ಸಚಿವ ಅಂಗಾರರಿಗೆ ಕೊನ್ನಡ್ಕದಲ್ಲಿ ಸನ್ಮಾನ, ಶಾಶ್ವತ ಚಪ್ಪರ ಲೋಕಾರ್ಪಣೆ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

 

ಬಳ್ಪ ಗ್ರಾಮದ ಶ್ರೀ ಆದಿ ನಾಗಬ್ರಹ್ಮ ಮೊಗೇರ್ಕಳ ದೈವಸ್ಥಾನದಲ್ಲಿ ಮೊಗೇರ್ಕಳ, ಗುಳಿಗ, ತನ್ನಿಮಾನಣಿಗ ಹಾಗೂ ಸ್ವಾಮಿ ಕೊರಗಜ್ಜ ದೈವಗಳ 6ನೇ ವರ್ಷದ ನೇಮೋತ್ಸವ ಸಂದರ್ಭದಲ್ಲಿ ದೈವಸ್ಥಾನದ ಶಾಶ್ವತ ಚಪ್ಪರವನ್ನು ಸಚಿವ ಎಸ್. ಅಂಗಾರ ಉದ್ಘಾಟಿಸಿದರು. ಉದ್ಘಾಟನೆ ನೆರವೇರಿಸಿದ ಸಚಿವ ಎಸ್. ಅಂಗಾರರನ್ನು ಮತ್ತು ಎಸ್.ಎಸ್.ಎಲ್.ಸಿ.ಯಲ್ಲಿ 600 ಅಂಕಗಳನ್ನು ಪಡೆದ ಕು. ಆಶಿತಾ ಬೆಟ್ಟಂಗಿಲರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ಶ್ರೀ ಆದಿ ನಾಗಬ್ರಹ್ಮ ಮೊಗೇರ್ಕಳ ದೈವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷ ಮೋನಪ್ಪ ಕೊನ್ನಡ್ಕ, ಬಿಜೆಪಿ ನಾಯಕ ವೆಂಕಟ್ ವಳಲಂಬೆ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಬಳ್ಪ ಗ್ರಾ.ಪಂ. ಮಾಜಿ ಸದಸ್ಯ ರಮಾನಂದ ಎಣ್ಣೆಮಜಲು ಸ್ವಾಗತಿಸಿ. ಪಂಜ ಸಿ.ಎ. ಬ್ಯಾಂಕ್ ಅಧ್ಯಕ್ಷ ಸುಬ್ರಹ್ಮಣ್ಯ ಕುಳ ಕಾರ್ಯಕ್ರಮ ನಿರೂಪಿಸಿದರು. ವೇದಿಕೆಯಲ್ಲಿ ಉಪಸ್ಥಿತರಿದ್ದ ನೇಮೋತ್ಸವ ಸಮಿತಿ ಅಧ್ಯಕ್ಷ ವಿಜಯಕುಮಾರ್ ಕಾಂಜಿ ಸನ್ಮಾನಿತರನ್ನು ಪರಿಚಯಿಸಿ ವಂದಿಸಿದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.