ನಿಡ್ವಾಳ ಶ್ರೀ ಮಹಾವಿಷ್ಣು ದೇವಳದಲ್ಲಿ ಶ್ರೀ ದೇವರಿಗೆ ರಂಗಪೂಜೆ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

 

 

 

ಮಾ.6. ಕಲಶಾಭಿಷೇಕ, ರಾತ್ರಿ ಶ್ರೀ ದೇವರ ದರ್ಶನ ಬಲಿ-ದೈವಗಳ ನೇಮ

ಶ್ರೀ ಮಹಾವಿಷ್ಣು ದೇವಾಲಯ ನಿಡ್ವಾಳ ಎಣ್ಮೂರು-ಐವತ್ತೊಕ್ಲು ಇದರ ಪ್ರತಿಷ್ಠಾ ವಾರ್ಷಿಕೋತ್ಸವಕ್ಕೆ .ಮಾ.5 ರಂದು ಹಸಿರು ಕಾಣಿಕೆ ಸಮರ್ಪಣೆ ಜರುಗಿತು. ರಾತ್ರಿ ಶ್ರೀ ದೇವರಿಗೆ ರಂಗಪೂಜೆ , ಪ್ರಸಾದ ವಿತರಣೆ ಜರುಗಿತು.ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ತುಳು ಹಾಸ್ಯ ನಾಟಕ ಬಂಗಾರ್ ಕಲಾವಿದೆರ್ ಪುರುಷರಕಟ್ಟೆ , ಪುತ್ತೂರು ಇವರಿಂದ
‘ನಾಡ್ಂಡಲ ತಿಕ್ಕಂದ್” ಪ್ರದರ್ಶನ ಗೊಳ್ಳಲಿದೆ .ಮಾ.6.ರಂದು ಮುಂಜಾನೆ ದೇವತಾ ಪ್ರಾರ್ಥನೆ, ಮಹಾಗಣಪತಿ ಹೋಮ, ಪಂಚವಿಂಶತಿ ಕಲಶಪೂಜೆ, ಮಧ್ಯಾಹ್ನ ಶ್ರೀದೇವರಿಗೆ ಕಲಶಾಭಿಷೇಕ, ನಾಗದೇವರಿಗೆ ಮತ್ತು ದೈವಗಳಿಗೆ ಕಲಶಾಭಿಷೇಕ ಮತ್ತು ತಂಬಿಲ ಸೇವೆ , ಶ್ರೀ ದೇವರಿಗೆ ಮಹಾಪೂಜೆ, ಪ್ರಸಾದ ವಿತರಣೆ ,ಅನ್ನಸಂತರ್ಪಣೆ ನಡೆಯಲಿದೆ. ಸಂಜೆ ದೈವಗಳ ಭಂಡಾರ ತೆಗೆಯುವುದು, ಶ್ರೀ ದೇವರಿಗೆ ಮಹಾಪೂಜೆ, ಶ್ರೀ ದೇವರ ಬಲಿ ಹೊರಟು ಉತ್ಸವ, ವಸಂತ ಕಟ್ಟೆಪೂಜೆ, ದರ್ಶನ ಬಲಿ, ಬಟಲು ಕಾಣಿಕೆ , ಪ್ರಸಾದ ವಿತರಣೆ, ವೈದಿಕ ಮಂತ್ರಾಕ್ಷತೆ,ಅನ್ನಸಂತರ್ಪಣೆ ನಡೆಯಲಿದೆ.ಬಳಿಕ ಶ್ರೀ ಚಾಮುಂಡಿ ಅಮ್ಮನವರ ಮತ್ತು ಪಂಜುರ್ಲಿ ಹಾಗೂ ಗುಳಿಗ ದೈವಗಳ ನೇಮೋತ್ಸವ ಜರುಗಲಿದೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.