ಎನ್ ಎಸ್ ಯು ಐ ಸುಳ್ಯ ವಿಧಾನಸಭಾ ಕ್ಷೇತ್ರದ ಅಧ್ಯಕ್ಷರಾಗಿ ಮಾ.6ರಂದು ನೇಮಕಗೊಂಡ ಕೀರ್ತನ್ ಕೊಡಪಾಲರವರಿಗೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ.ಜಯರಾಮರವರು ಶಾಲು ಹೊದಿಸಿ ಮಾಲಾರ್ಪಣೆ ಮಾಡಿ ಸನ್ಮಾನಿಸಿ ಶುಭಹಾರೈಸಿದರು. ಅಲ್ಲದೇ ನಗರ ಪಂಚಾಯತ್ ಸದಸ್ಯ ಶರೀಫ್ ಕಂಠಿ, ಎನ್ ಎಸ್ ಯು ಐ ಕಾರ್ಯಕರ್ತರು ನೂತನ ಅಧ್ಯಕ್ಷರನ್ನು ಸನ್ಮಾನಿಸಿದರು.