ನಿಡ್ವಾಳ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

 

ಐವತ್ತೊಕು – ಎಣ್ಮೂರು ನಿಡ್ವಾಳ ಶ್ರೀ ಮಹಾವಿಷ್ಣು ದೇವಸ್ಥಾನದ ಪ್ರತಿಷ್ಠಾ ವಾರ್ಷಿಕೋತ್ಸವು ಮಾ.5 ಮತ್ತು ಮಾ 6 ರಂದು ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಭಕ್ತಿ-ಸಡಗರದಿಂದ ನಡೆಯಿತು.


ಮಾ.6ರಂದು ಮುಂಜಾನೆ ಮಹಾಗಣಪತಿ ಹೋಮ, ಪಂಚವಿಂಶತಿ ಕಲಶ ಪೂಜೆ, ಮಧ್ಯಾಹ್ನ ಶ್ರೀ ದೇವರಿಗೆ ಕಲಶಾಭಿಷೇಕ,ನಾಗದೇವರಿಗೆ ಮತ್ತು ದೈವಗಳಿಗೆ ಕಲಶಾಭಿಷೇಕ ಮತ್ತು ತಂಬಿಲ ಸೇವೆ, ಮಹಾಪೂಜೆ, ಪ್ರಸಾದ ವಿತರಣೆ,ಅನ್ನಸಂತರ್ಪಣೆ. ಸಂಜೆ ದೈವಗಳ ಭಂಡಾರ ತೆಗೆಯಲಾಯಿತು. ರಾತ್ರಿ ಮಹಾಪೂಜೆ ಬಳಿಕ ಶ್ರೀ ದೇವರ ಬಲಿ ಹೊರಟು ಉತ್ಸವ, ವಸಂತಕಟ್ಟೆ ಪೂಜೆ, ದರ್ಶನ ಬಲಿ, ಬಟ್ಟಲು ಕಾಣಿಕೆ, ಪ್ರಸಾದ ವಿತರಣೆ, ವೈದಿಕ ಮಂತ್ರಾಕ್ಷತೆ, ಅನ್ನಸಂತರ್ಪಣೆ, ಹಾಗೂ ಶ್ರೀ ಚಾಮುಂಡಿ ಅಮ್ಮನವರ ಮತ್ತು ಪಂಜುರ್ಲಿ ಹಾಗೂ ಗುಳಿಗ ದೈವಗಳ ನೇಮೋತ್ಸವ ನಡೆಯಿತು.

ಶ್ರೀ ದೇವರ ಬಲಿಯೊಂದಿಗೆ ಚೆಂಡೆ.ಬ್ಯಾಂಡ್,ವಾಲಗ ಹಾಗೂ ವೇದಮಂತ್ರ ಘೋಷ, ಭಜನಾ ತಂಡ, ಭಕ್ತರು ಪಾಲ್ಗೊಂಡಿದ್ದರು.


ಇದೇ ಸಂದರ್ಭ ಆಕರ್ಷಕ ಸಿಡಿಮದ್ದು ಪ್ರದರ್ಶನ ಜರುಗಿತು. ಉತ್ಸವದ ಪ್ರಯುಕ್ತ ದೇವಳವನ್ನು ವಿದ್ಯುತ್ ದೀಪ,ಹೂವಿನಿಂದ ಶೃಂಗರಿಸಲಾಗಿತ್ತು. ಮಾ.೫.ರಂದು ಹಸಿರು ಕಾಣಿಕೆ ಸಮರ್ಪಣೆ, ಮಧ್ಯಾಹ್ನ ಮಹಾಪೂಜೆ,ರಾತ್ರಿ ಶ್ರೀ ದೇವರಿಗೆ ರಂಗಪೂಜೆ ನಡೆಯಿತು. ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಬಂಗಾರ್ ಕಲಾವಿದೆರ್ ಪುರಷರಕಟ್ಟೆ ಪುತ್ತೂರು ಅಭಿನಯದ ‘ನಾಡ್ಂಡಲ ತಿಕ್ಕಂದ್…’ ತುಳು ನಗೆನಾಟಕ ಪ್ರದರ್ಶನ ಗೊಂಡಿತು. ಆಡಳಿತ ಸಮಿತಿ ಅಧ್ಯಕ್ಷ ಚಂದ್ರಪ್ರಕಾಶ್ ಕಂಬಳ, ಕಾರ್ಯದರ್ಶಿ ಗುರುಪ್ರಸಾದ್ ತೋಟ, ಅಭಿವೃದ್ಧಿ ಸಮಿತಿ ಅಧ್ಯಕ್ಷ ರಾಮಕೃಷ್ಣ ಸಾಯಿಕೃಪ, ಕಾರ್ಯದರ್ಶಿ ಕುಸುಮಾಧರ ಕರಿಮಜಲು,ಉತ್ಸವ ಸಮಿತಿ ಅಧ್ಯಕ್ಷ ಅಶೋಕ್ ಮೇಲ್ಪಾಡಿ, ದೇವದ ಅರ್ಚಕರು, ವಿವಿಧ ಸಮಿತಿಗಳ ಪದಾಧಿಕಾರಿಗಳು, ಸಾವಿರಾರು ಭಕ್ತರು ಪಾಲ್ಗೊಂಡಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.