Breaking News

ರಾಜ್ಯ ಬಜೆಟ್ : ಕೃಷಿ ಮತ್ತು ಪೂರಕ ಚಟುವಟಿಕೆಗಳಿಗೆ 31,028 ಕೋಟಿ ರೂ. ಅನುದಾನ

Advt_Headding_Middle
Advt_Headding_Middle
Advt_Headding_Middle
Advt_Headding_Middle

 

 

 2021-22ನೇ ಸಾಲಿನ ರಾಜ್ಯ ಬಜೆಟ್​ನಲ್ಲಿ ಕೃಷಿ ಮತ್ತು ಪೂರಕ ಚಟುವಟಿಕೆಗಳ ವಲಯಕ್ಕೆ ಸರ್ಕಾರ 31,028 ಕೋಟಿ ರೂ. ಅನುದಾನವನ್ನು ಮೀಸಲಿಟ್ಟಿದ್ದು, ಸಂಪೂರ್ಣ ವಿವರಣೆ ಈ ಕೆಳಕಂಡಂತಿದೆ.

° ಅಡಿಕೆ ಬೆಳಗಾರರನ್ನು ಬಾಧಿಸುತ್ತಿರುವ ಹಳದಿ ಎಲೆ ರೋಗದ ಕುರಿತ ಸಂಶೋಧನೆ ಹಾಗೂ ಪರ್ಯಾಯ ಬೆಳೆಯನ್ನು ಪ್ರೋತ್ಸಾಹಿಸಲು 25 ಕೋಟಿ ರೂ.

° ಸುವಾಸನೆಯುಕ್ತ ಮತ್ತು ಗಿಡಗಳು, ಹಣ್ಣು ಹಂಪಲು, ತರಕಾರಿಗಳು ಮತ್ತು ಸಂಬಾರ ಪದಾರ್ಥಗಳಿಗಾಗಿ ಹೊಸ ಕೃಷಿ ರಪ್ತು ವಲಯ ಸ್ಥಾಪನೆ

° ಸಾವಯವ ಕೃಷಿ ಉತ್ತೇಜನಕ್ಕೆ 500 ಕೋಟಿ ರೂ.ಗಳ ವೆಚ್ಚದಲ್ಲಿ ಯೋಜನೆ ಜಾರಿ.

° ವಿಜಯಪುರ ಜಿಲ್ಲೆ ಇಟ್ಟಂಗಿಹಾಳ ಗ್ರಾಮದಲ್ಲಿ ಆತ್ಮನಿರ್ಭರ ಭಾರತ ಅಭಿಯಾನ ಯೋಜನೆಯಡಿ ಆಹಾರ ಪಾರ್ಕ್ ಸ್ಥಾಪನೆ.

° ಕೃಷಿ ವಿಶ್ವವಿದ್ಯಾನಿಲಯಗಳಲ್ಲಿ ರೈತರ ಮಕ್ಕಳಿಗೆ ಇರುವ ಮೀಸಲಾತಿ ಶೇ.50ಕ್ಕೆ ಹೆಚ್ಚಳ.

° ಕೃಷಿ ಯಾಂತ್ರೀಕರಣ ಯೋಜನೆಯಡಿ ಸಣ್ಣ ಟ್ಯ್ರಾಕ್ಟರ್​ಗಳಿಗೆ ನೀಡುತ್ತಿದ್ದ ಸಹಾಯಧನ 25-45 PTO ಟ್ಯ್ರಾಕ್ಟರ್​ಗಳಿಗೆ ವಿಸ್ತರಣೆ.

° ಆತ್ಮ ನಿರ್ಭರ ಭಾರತ ಅಭಿಯಾನದ ಅಡಿಯಲ್ಲಿ ಆಹಾರ ಸಂಸ್ಕರಣೆ ಹಾಗೂ ಕೊಯ್ಲೋತ್ತರ ನಿರ್ವಹಣಾ ಘಟಕಗಳಿಗೆ ನೀಡುವ ಶೇ. 35 ರಷ್ಟು ಸಹಾಯಧನವನ್ನು ಶೇ. 50ಕ್ಕೆ ಹೆಚ್ಚಿಸಲು ರಾಜ್ಯ ಸರ್ಕಾರದಿಂದ ಶೇ. 15 ರಷ್ಟು ಹೆಚ್ಚುವರಿ ಸಹಾಯಧನ; 50 ಕೋಟಿ ರೂ. ಗಳ ಅನುದಾನ.

° ಕೊಪ್ಪಳ ಜಿಲ್ಲೆಯ ಸಿರಿವಾರ ಗ್ರಾಮದಲ್ಲಿ ತೋಟಗಾರಿಕೆ ತಂತ್ರಜ್ಞಾನ ಪಾರ್ಕ್ ಅಭಿವೃದ್ಧಿ.

° ರೈತ ಉತ್ಪಾದಕರ ಸಂಸ್ಥೆಗಳು ಮಾರಾಟ ಮಾಡುವ ತೋಟಗಾರಿಕೆ ಉತ್ಪನ್ನಗಳಿಗೆ ‘ಬ್ರಾಂಡ್ ವ್ಯಾಲ್ಯೂ’ ಕಲ್ಪಿಸಲು ಹಾಗೂ ಉತ್ತಮ ಮಾರುಕಟ್ಟೆ ಸಂಪರ್ಕ ಒದಗಿಸಲು ಕ್ರಮ.

° ತೋಟಗಾರಿಕಾ ಬೆಳೆಗಳ ರಫ್ತಿಗೆ ರಾಜ್ಯದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಗಳಲ್ಲಿ ಪೂರಕ ಸೌಲಭ್ಯ. ಹಣ್ಣು ಮತ್ತು ತರಕಾರಿ ಬೆಳೆಗಳ ಮೌಲ್ಯ ವರ್ಧನೆ ಮತ್ತು ಮಾರುಕಟ್ಟೆ ಸಂಪರ್ಕ ಕಲ್ಪಿಸಲು ಬೆಳೆಗಾರರಿಗೆ ತರಬೇತಿ ಮತ್ತು ತಾಂತ್ರಿಕ ಬೆಂಬಲ.

° ಕಳಸಾ ಬಂಡೂರಿ ತಿರುವು ಯೋಜನೆಗೆ 1677 ಕೋಟಿ ರೂ. ಅನುದಾನ. ಭದ್ರಾ ಯೋಜನೆಯನ್ನು ರಾಷ್ಟ್ರೀಯ ಯೋಜನೆಯೆಂದು ಘೋಷಿಸಲು ಕೇಂದ್ರಕ್ಕೆ ಒತ್ತಾಯ.

° 58 ಡ್ಯಾಂಗಳ ಪುನಶ್ಚೇತನಕ್ಕೆ ಕ್ರಮ. ಮೀನು ಮಾರಾಟ, ಮತ್ಸದರ್ಶಿನಿಗಳ ಸ್ಥಾಪನೆಗೆ 30 ಕೋಟಿ ರೂ.,

° ಸೋಮೇಶ್ವರ ಕಡಲ ತೀರ ಅಭಿವೃದ್ಧಿಗೆ 10 ಕೋಟಿ ರೂಪಾಯಿ ಮತ್ತು ವಿಜಯಪುರದಲ್ಲಿ ಫುಡ್ ಪಾರ್ಕ್ ಸ್ಥಾಪನೆ.

° ಚಾಮರಾಜನಗರದಲ್ಲಿ ಅರಿಶಿನ ಮಾರುಕಟ್ಟೆಯ ಸಮಗ್ರ ಅಭಿವೃದ್ಧಿ. ಬಳ್ಳಾರಿಯ ಆಲದಹಳ್ಳಿ ಗ್ರಾಮದಲ್ಲಿ ಅತ್ಯಾಧುನಿಕ ಒಣಮೆಣಸಿನಕಾಯಿ ಮಾರುಕಟ್ಟೆ ಸ್ಥಾಪನೆ..

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.