ವನಿತಾ ಸಮಾಜ ಪಂಜ ಇದರ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ ಮಾ.8.ರಂದು ಪಂಜ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಜರಗಿತು. ಕಾರ್ಯಕ್ರಮದಲ್ಲಿ ವನಿತಾ ಸಮಾಜ ಅಧ್ಯಕ್ಷೆ ಶ್ರೀಮತಿ ಹೇಮಲತಾ ಜನಾರ್ಧನ ರವರು ಸಭಾಧ್ಯಕ್ಷತೆಯನ್ನು ವಹಿಸಿದ್ದರು. ಅತಿಥಿಗಳಾಗಿ ಪಂಜ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಪೂರ್ಣಿಮಾ ದೇರಾಜೆ, ಉಪಾಧ್ಯಕ್ಷೆ ಶ್ರೀಮತಿ ನೇತ್ರಾವತಿ ಕಲ್ಲಾಜೆ , ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮಣಿಯಾನ ಪುರುಷೋತ್ತಮ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಪೂರ್ಣಿಮಾ ದೇರಾಜೆ, ಉಪಾಧ್ಯಕ್ಷೆ ಶ್ರೀಮತಿ ನೇತ್ರಾವತಿ ಕಲ್ಲಾಜೆ ಹಾಗೂ ಗ್ರಾಮ ಪಂಚಾಯತ್ ಸದಸ್ಯರನ್ನು ಅಭಿನಂದಿಸಲಾಯಿತು.ಕಾರ್ಯಕ್ರಮದಲ್ಲಿ ಶ್ರೀಮತಿ ಹೇಮಲತಾ ಜನಾರ್ಧನ ರವರು ಸ್ವಾಗತಿಸಿದರು. ಶ್ರೀಮತಿ ಪುಷ್ಪಾ .ಡಿ .ಪ್ರಸಾದ್ ಕಾನತ್ತೂರ್ ನಿರೂಪಿಸಿದರು.
ಶ್ರೀಮತಿ ಸುಮಾ ವಂದಿಸಿದರು.