Breaking News

ಸುಳ್ಯದಲ್ಲಿ ಮಹಿಳಾ ದಿನಾಚರಣೆ

Advt_Headding_Middle
Advt_Headding_Middle
Advt_Headding_Middle
Advt_Headding_Middle

ದ.ಕ.ಜಿಲ್ಲಾ ಮಹಿಳಾ ಮಂಡಲಗಳ ಒಕ್ಕೂಟ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಸೇವಾ ಯೋಜನೆಗಳ ನೇತೃತ್ವದಲ್ಲಿ ಮಹಿಳಾ ಸಮಾಜ ಸುಳ್ಯ, ಲಯನ್ಸ್ ಕ್ಲಬ್ ಸುಳ್ಯ, ಪಯಸ್ವಿನಿ ಯುವತಿ ಮಂಡಲ ಸುಳ್ಯ, ಎಂ.ಬಿ.ಫೌಂಡೇಶನ್ ಸುಳ್ಯ, ಸ್ತ್ರೀ ಶಕ್ತಿತಾಲೂಕು ಒಕ್ಕೂಟ ಸುಳ್ಯ ಇವರ ಸಂಯುಕ್ತ ಅಶ್ರಯದಲ್ಲಿ ವಿಶ್ವ ಮಹಿಳಾ ದಿನಾಚರಣೆ ಮಾ.9 ರಂದು ನಡೆಯಿತು.

ನಗರ ಪಂಚಾಯತ್ ಅಧ್ಯಕ್ಷ ವಿನಯ್ ಕುಮಾರ್ ಕಂದಡ್ಕ ಸಭಾಧ್ಯಕ್ಷತೆ ವಹಿಸಿದ್ದರು. ತಾಲೂಕು ಪಂಚಾಯತ್ ಅಧ್ಯಕ್ಷ ಚನಿಯ ಕಲ್ತಡ್ಕ ಕಾರ್ಯಕ್ರಮವನ್ನು ಐವರು ಬಾಲಕಿಯರು ಉದ್ಘಾಟಿಸಿದರು.
” ಮಹಿಳೆಯರು ತಾಯಿಯಾಗಿ, ಸಹೋದರಿಯಾಗಿ, ಪತ್ನಿಯಾಗಿ ಸಮಾಜದಲ್ಲಿ ಮಹತ್ವದ ಪಾತ್ರ ವಹಿಸುತ್ತಾರೆ. ಮಹಿಳೆ ಇಲ್ಲದಿದ್ದರೆ ಪುರುಷರಿಗೆ ಬದುಕು ಅಸಾಧ್ಯ. ಆದ್ದರಿಂದ ಮಹಿಳೆಯರಿಗೆ ಅತ್ಯುನ್ನತ ಗೌರವ ಸಿಗಲೇಬೇಕು” ಎಂದು ಚನಿಯ ಕಲ್ತಡ್ಕ ಹೇಳಿದರು.

ಜಿ.ಪಂ.ಸದಸ್ಯೆಯರಾದ ಶ್ರೀಮತಿ ಆಶಾ ತಿಮ್ಮಪ್ಪ ಹಾಗೂ ಪುಷ್ಪಾವತಿ ಬಾಳಿಲ, ತಾ.ಪಂ.ಉಪಾಧ್ಯಕ್ಷೆ ಶ್ರೀಮತಿ ಪುಷ್ಪಾ ಮೇದಪ್ಪ , ನ.ಪಂ.ಉಪಾಧ್ಯಕ್ಷೆ ಶ್ರೀಮತಿ ಸರೋಜಿನಿ ಪೆಲತಡ್ಕ , ತಹಶೀಲ್ದಾರ್ ಕು.ಅನಿತಾಲಕ್ಷ್ಮಿ
ವಿಕಲಚೇತನರ ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ಸಾಧನೆಗೈದು ರಾಷ್ತ್ರಮಟ್ಟಕ್ಕೆ ಆಯ್ಕೆಯಾಗಿರುವ ಶ್ರೀಮತಿ ರಂಜಿನಿ ಎಡಮಂಗಲ ಹಾಗೂ ನಾಟಿ ವೈದ್ಯೆ ಸೀತಾಲಕ್ಷ್ಮಿ ಯವರನ್ನು ಸನ್ಮಾನಿಸಿ ಗೌರವಿಸಲಾಯಿತು.

 

ದ.ಕ. ಜಿಲ್ಲಾ ಮಹಿಳಾ ಮಂಡಲಗಳ ಒಕ್ಕೂಟದ ಅಧ್ಯಕ್ಷರುಗಳಾಗಿ ಕಾರ್ಯನಿರ್ವಹಿಸಿದ ಶ್ರೀಮತಿ ಸರಳಾ ಕಾಂಚನ್, ಶ್ರೀಮತಿ ಅನಸೂಯ ರೈ, ಶ್ರೀಮತಿ ಲೋಕೇಶ್ವರಿ ವಿನಯಚಂದ್ರ , ಶ್ರೀಮತಿ ವಿಜಯಲಕ್ಷ್ಮಿ ಶೆಟ್ಟಿ , ಶ್ರೀಮತಿ ಪ್ರೇಮಲತಾ ರಾವ್, ಜಿಲ್ಲಾ ಗೌರವಾಧ್ಯಕ್ಷೆ ಶ್ರೀಮತಿ ಸವಿತ ಸುದೇವ್ , ಖಜಾಂಚಿ ಧರ್ಮಾವತಿ ವಿಟ್ಯಯವರನ್ನು ಸನ್ಮಾನಿಸಿ ಗೌರವಿಸಲಾಯಿತು.

ಕಳೆದ ವರ್ಷ ರಾಜ್ಯ ಸರಕಾರದಿಂದ ಕಿತ್ತೂರು ಚೆನ್ನಮ್ಮ ಪ್ರಶಸ್ತಿಯಿಂದ ಪುರಸ್ಕೃತರಾದ ಜಿಲ್ಲಾ ಒಕ್ಕೂಟದ ಈಗಿನ ಅಧ್ಯಕ್ಷೆ ಶ್ರೀಮತಿ ಹರಿಣಿ ಸದಾಶಿವರನ್ನು ಸತ್ಕರಿಸಲಾಯಿತು.
ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಿರೂಪಣಾಧಿಕಾರಿಯಾದ ಕು.ಶ್ಯಾಮಲಾ ಸಿ.ಕೆ. ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಹಿಳಾ ಸಬಲೀಕರಣದ ಕುರಿತು ಮಾತನಾಡಿದರು.

ಮಹಿಳಾ ವಾಹನ ಜಾಥಾ ಉದ್ಘಾಟಿಸಿದ ಶ್ರೀಮತಿ ಸುಮಾ ಸುಬ್ಬ ರಾವ್, ಲಯನ್ಸ್ ಕ್ಲಬ್ ಅಧ್ಯಕ್ಷ ಲ.ರಾಮಚಂದ್ರ ಪೆಲತಡ್ಕ, ತಾ.ಪಂ.ಸದಸ್ಯ ತೀರ್ಥರಾಮ ಜಾಲ್ಸೂರು, ಶ್ರೀಮತಿ ಚಂಚಲ ತೇಜೋಮಯರವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಜಿಲ್ಲಾ ಮಹಿಳಾ ಮಂಡಲಗಳ ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ಹರಿಣಿ ಸದಾಶಿವ ಸ್ವಾಗತಿಸಿ, ಸಿ.ಡಿ.ಪಿ.ಒ. ಶ್ರೀಮತಿ ರಶ್ಮಿ ಅಶೋಕ್ ನೆಕ್ರಾಜೆ ಪ್ರಾಸ್ತಾವಿಕ ಮಾತುಗಳನ್ನಾಡಿದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.