ಬೆಳ್ಳಾರೆ ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ಮಹಿಳಾ ದಿನಾಚರಣೆ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

 

ಕೋವಿಡ್ ನಂತಹ ರೋಗಗಳನ್ನು ತಡೆಯಲು ವಿದ್ಯಾರ್ಥಿಗಳು ದೈಹಿಕ ಸ್ವಾಥ್ಯದ ಕಡೆ ಹೆಚ್ಚು ಗಮನ ಹರಿಸಬೇಕು  : ಡಾ| ಅಶ್ವಥಿ

ಕೋವಿಡ್ ನಂತಹ ರೋಗಗಳನ್ನು ತಡೆಯಲು ವಿದ್ಯಾರ್ಥಿಗಳು ತಮ್ಮ ದೈಹಿಕ ಸ್ವಾಥ್ಯದ ಕಡೆ ಹೆಚ್ಚು ಗಮನ ಹರಿಸಬೇಕು ಎಂದು ಬೆಳ್ಳಾರೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಅಶ್ವಥಿ ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಅವರು ಕರ್ನಾಟಕ ಪಬ್ಲಿಕ್ ಸ್ಕೂಲ್ ಬೆಳ್ಳಾರೆ ಇಲ್ಲಿನ ಪ್ರಾಥಮಿಕ ವಿಭಾಗದ, ಭಾರತ್ ಸ್ಕೌಟ್ಸ್- ಗೈಡ್ಸ್ ವತಿಯಿಂದ ನಡೆದ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಕೊರೋನ ವಾರಿಯರ್ಸ್ ತಂಡವನ್ನು ಗೌರವಿಸುವ ಸಂದರ್ಭದಲ್ಲಿ ಸನ್ಮಾನವನ್ನು ಸ್ವೀಕರಿಸಿ ಮಾತನಾಡುತ್ತಿದ್ದರು. ಕೋವಿಡ್-19ರ ಸಂದರ್ಭದಲ್ಲಿ ಅನುಸರಿಸಬೇಕಾದ ನಿಯಮಗಳು, ವಿದ್ಯಾರ್ಥಿಗಳು ಆರೋಗ್ಯದ ಕಡೆ ಕೊಡಬೇಕಾದ ಕಾಳಜಿಗಳು ಮತ್ತು ಆಹಾರ ತೆಗೆದುಕೊಳ್ಳುವ ಸಂದರ್ಭದಲ್ಲಿ ಅನುಸರಿಸಬೇಕಾದ ಮುನ್ನೆಚ್ಚರಿಕೆಗಳು ಜತೆಗೆ, ಸ್ವಚ್ಛತೆಯ ವಿಧಾನಗಳ ಬಗ್ಗೆ ಮಾಹಿತಿಯನ್ನು ಕೂಡ ಈ ಸಂದರ್ಭದಲ್ಲಿ ನೀಡಿದರು.
ಶಾಲೆಯ ಪದವಿಧರೇತರ ಮುಖ್ಯ ಗುರುಗಳಾದ ಜಿ. ಮಾಯಿಲಪ್ಪ ಇವರು ಪ್ರಾಸ್ತಾವಿಕವಾಗಿ ಮಾತನಾಡಿ, ಕೋವಿಡ್ 19 ರ ಸಂದರ್ಭದಲ್ಲಿ ಕೋವಿಡ್ ವಾರಿಯರ್ಸ್ ಎಂದು ಗುರುತಿಸಲ್ಪಟ್ಟಿರುವ ವೈದ್ಯರು, ನರ್ಸುಗಳು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತರು ಮತ್ತು ಶಿಕ್ಷಕರು ನಮ್ಮೆಲ್ಲರ ಆರೋಗ್ಯ ದೃಷ್ಟಿಯಿಂದ ಅತ್ಯಂತ ಗೌರವಯುತವಾದ ಕೆಲಸವನ್ನು ಮಾಡಿದ್ದಾರೆ. ಆರೋಗ್ಯ ಸಂರಕ್ಷಣೆಯಲ್ಲಿ ಅವರ ಪಾತ್ರ ಬಹಳ ಮಹತ್ವದ್ದಾಗಿದೆ. ತಮ್ಮ ಜೀವದ ಹಂಗು ತೊರೆದು ನಮಗೆ ಅತ್ಯಂತ ವಿಶೇಷವಾದ ಸೇವೆಯನ್ನು ಅವರು ಸಲ್ಲಿಸಿರುತ್ತಾರೆ. ಮಹಿಳಾ ದಿನಾಚರಣೆಯ ಈ ಸಂದರ್ಭದಲ್ಲಿ ಬೆಳ್ಳಾರೆ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವೈದ್ಯರು, ನರ್ಸ್ ಮತ್ತು ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರನ್ನು ಸನ್ಮಾನಿಸಲು ಸಂತಸವಾಗುತ್ತಿದೆ ಎಂದರು. ಶಾಲಾ ಕಬ್ ಶಿಕ್ಷಕಿ ಸವಿತಾ ಗುಜರನ್ ಅವರು ಮಹಿಳಾ ದಿನಾಚರಣೆಯ ಆರಂಭ ಮತ್ತು ಪ್ರಸಕ್ತ ವರ್ಷ ಅದನ್ನು ಆಚರಿಸುತ್ತಿರುವ ರೀತಿ, ಸ್ಕೌಟ್ ಗೈಡ್ ತಂಡವು ಅದನ್ನು ಹಮ್ಮಿಕೊಂಡಿರುವ ಬಗೆ, ಇವುಗಳ ಬಗ್ಗೆ ವಿವರವಾದ ಮಾಹಿತಿಯನ್ನು ತಮ್ಮ ದಿನನುಡಿಯಲ್ಲಿ ಸಲ್ಲಿಸಿದರು. ಬಳಿಕ ಪ್ರಾಥಮಿಕ ಆರೋಗ್ಯ ಕೇಂದ್ರ ಬೆಳ್ಳಾರೆ ಇಲ್ಲಿ ಕಾರ್ಯನಿರ್ವಹಿಸುತ್ತಿರುವ ಡಾಕ್ಟರ್ ಅಶ್ವಥಿ, ಆರೋಗ್ಯ ಸಹಾಯಕಿ ಶ್ರೀಮತಿ ವಸಂತಿ, ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ಇಂದಿರಾ, ಆಶಾ ಕಾರ್ಯಕರ್ತೆಯರಾದ ಶ್ರೀಮತಿ ಗೀತಾ, ಶ್ರೀಮತಿ ಲಲಿತಾ, ಶ್ರೀಮತಿ ಶೀಲಾ ಹಾಗೂ ಶಾಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಶಿಕ್ಷಕಿ ಶ್ರೀಮತಿ ಅರುಣಾಕ್ಷಿ ಇವರುಗಳನ್ನು ಫಲಪುಷ್ಪ ನೀಡಿ ಸನ್ಮಾನಿಸಲಾಯಿತು. ಬೆಳ್ಳಾರೆ ಕ್ಲಸ್ಟರ್ ನ ಸಮೂಹ ಸಂಪನ್ಮೂಲ ವ್ಯಕ್ತಿ ಶ್ರೀಮತಿ ಸವಿತಾ ಕುಮಾರಿ ಇವರು ಕಾರ್ಯಕ್ರಮದ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದರು. ಸಮಾರಂಭದ ಅಧ್ಯಕ್ಷತೆಯನ್ನು ಎಸ್ಡಿಎಂಸಿ ಅಧ್ಯಕ್ಷರಾದ ಕೇಶವ ನಾಯಕ್ ವಹಿಸಿ, ಮಹಿಳಾ ದಿನಾಚರಣೆಯಲ್ಲಿ ಕೋವಿಡ್ ವಾರಿಯರ್ಸ್ ಇವರನ್ನು ಸನ್ಮಾನಿಸುವುದು ಅತ್ಯಂತ ಸೂಕ್ತವಾಗಿದೆ ಎಂದರು.
ಶಿಕ್ಷಕ ದಿನೇಶ್ ಮಾಚಾರ್ ನಿರೂಪಿಸಿದರು. ಗೈಡ್ ವಿದ್ಯಾರ್ಥಿನಿಯರ ಪ್ರಾರ್ಥನೆಯೊಂದಿಗೆ ಆರಂಭವಾಯಿತು. ಗೈಡ್ ಶಿಕ್ಷಕಿ ಸಾವಿತ್ರಿ ಬಿಎಸ್ ಸ್ವಾಗತಿಸಿ, ಇನ್ನೋರ್ವ ಗೈಡ್ ಶಿಕ್ಷಕಿ ರಾಜೀವಿ ಎ ಇವರ ವಂದನಾರ್ಪಣೆಯೊಂದಿಗೆ ಕಾರ್ಯಕ್ರಮ ಸಮಾಪನಗೊಂಡಿತು. ಈ ಕಾರ್ಯಕ್ರಮದಲ್ಲಿ ಶಾಲಾ ಎಸ್ಡಿಎಂಸಿ ಸದಸ್ಯರು, ಪೋಷಕರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.