Breaking News

ಕನಕಮಜಲು: ಸಾಮಾಜಿಕ ಪರಿಶೋಧನಾ ಗ್ರಾಮಸಭೆ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

ಕನಕಮಜಲು ಗ್ರಾಮ ಪಂಚಾಯತಿಯ ಸಾಮಾಜಿಕ ಪರಿಶೋಧನಾ ಗ್ರಾಮಸಭೆ ಹಾಗೂ ಹದಿನಾಲ್ಕನೇ ಹಣಕಾಸು ಯೋಜನೆಯ ಸಭೆಯು ಗ್ರಾಮ ಪಂಚಾಯತಿ ಸಭಾಭವನದಲ್ಲಿ ಮಾ.10ರಂದು ಬೆಳಿಗ್ಗೆ ನಡೆಯಿತು.


ಶಿಶು ಅಭಿವೃದ್ಧಿ ಇಲಾಖೆಯ ಮೇಲ್ವಿಚಾರಕಿ ಶ್ರೀಮತಿ ಉಷಾ ಅವರು ನೋಡೆಲ್ ಅಧಿಕಾರಿಯಾಗಿ ಉಪಸ್ಥಿತರಿದ್ದರು. ಗ್ರಾಮ ಪಂಚಾಯತಿ ಅಧ್ಯಕ್ಷ ಶ್ರೀಧರ ಕುತ್ಯಾಳ ಅಧ್ಯಕ್ಷತೆ ವಹಿಸಿದ್ದರು.
ಸಭೆಯಲ್ಲಿ 2018-19 ಮತ್ತು 2019-20ನೇ ಸಾಲಿನ ಹಣಕಾಸು ಯೋಜನೆ ಹಾಗೂ ಮಹಾತ್ಮ ಗಾಂಧಿ ಉದ್ಯೋಗ ಖಾತರಿ ಯೋಜನೆಯ 2020-21ನೇ ಸಾಲಿನ ದ್ವಿತೀಯ ಹಂತದಲ್ಲಿ ನಡೆದ ಕಾಮಗಾರಿಗಳ ಪರಿಶೀಲನೆಯ ಬಗ್ಗೆ ಮಾಹಿತಿ ನೀಡಲಾಯಿತು.


ಈ ಸಂದರ್ಭದಲ್ಲಿ ತೋಟಗಾರಿಕಾ ಇಲಾಖೆಯ ತಾಂತ್ರಿಕ ಸಹಾಯಕ ಅಭಿಯಂತರುಗಳಾದ ಆಕಾಂಕ್ಷ ಆತೀಶ್, ಸಾಮಾಜಿಕ ಪರಿಶೋಧನಾ ತಂಡದ ಪದಾಧಿಕಾರಿಗಳು, ಸಾಮಾಜಿಕ ಪರಿಶೋಧನೆಯ ತಾಲೂಕ ಸಂಯೋಜಕರುಗಳು ಉಪಸ್ಥಿತರಿದ್ದು, ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಸರೋಜಿನಿ, ಉಪಾಧ್ಯಕ್ಷೆ ಶ್ರೀಮತಿ ದೇವಕಿ ಕುದ್ಕುಳಿ, ಸದಸ್ಯರುಗಳಾದ ರವಿಚಂದ್ರ ಕಾಪಿಲ, ಪ್ರೇಮಲತ ಪಂಜಿಗುಂಡಿ, ಶಾರದಾ ಉಗ್ಗಮೂಲೆ, ಸುಮಿತ್ರ ಕುತ್ಯಾಳ ಸೇರಿದಂತೆ ಯೋಜನೆಯ ಫಲಾನುಭವಿಗಳು, ಗ್ರಾ.ಪಂ. ಸಿಬ್ಬಂದಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.