ಚೆಂಬು:ಸ್ವಚ್ಛ ಗ್ರಾಮ ಹಸಿರು ಗ್ರಾಮದ ಬಗ್ಗೆ ತರಬೇತಿ ಕಾರ್ಯಕ್ರಮ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

 

 

ನೆಹರೂ ಯುವ ಕೇಂದ್ರ, ಮಡಿಕೇರಿ ಇದರ ಆಶ್ರಯದಲ್ಲಿ ಶ್ರೀ ಭಗವಾನ್ ಸಂಘ ಊರುಬೈಲು ಇವರು ಆಯೋಜಿಸಿದ ಸ್ವಚ್ಛ ಗ್ರಾಮ ಹಸಿರು ಗ್ರಾಮದ ಬಗ್ಗೆ ತರಬೇತಿ ಮತ್ತು ಆರೋಗ್ಯ ಅರಿವು ಕಾರ್ಯಕ್ರಮ ಮಾ.೧೧ ರಂದು ಚೆಂಬು ಪಯಸ್ವಿನಿ ಸೊಸೈಟಿ ಸಭಾಂಗಣದಲ್ಲಿ ನಡೆಯಿತು.
ಚೆಂಬು ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ಕುಸುಮ ಎ. ಕಾರ್ಯಕ್ರಮದ ಉದ್ಘಾಟನೆ ನಡೆಸಿದರು. ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ರವಿರಾಜ್ ಹೊಸೂರು ವಹಿಸಿದ್ದರು. ಮುಖ್ಯ ಅತಿಥಿಗಳಾದ ಕೊಡಗು ಜಿಲ್ಲಾ ಯುವಜನ ಅಧಿಕಾರಿ ಎಸ್.ಸಿದ್ಧರಾಮಪ್ಪ ಮಾತನಾಡಿ ಸ್ವಚ್ಛ ಗ್ರಾಮ ನಿರ್ಮಾಣದಲ್ಲಿ ಯುವ ಜನಾಂಗದ ಜವಾಬ್ದಾರಿ ಮತ್ತು ಮಹತ್ವವನ್ನು ವಿವರಿಸಿದರು. ಸಲಹಾ ಸಮಿತಿ ಸದಸ್ಯ ಡಾ|ಮನು ಮೆನನ್ ಮಾತನಾಡಿ, ನಿರಂತರವಾಗಿ ಸಮಾಜಮುಖಿ ಕೆಲಸ ಮಾಡುತ್ತಿರುವ ಭಗವಾನ್ ಸಂಘದ ಬದ್ಧತೆಯನ್ನು ಶ್ಲಾಘಿಸಿದರು. ಜಲ್ಲಾ ಆರೋಗ್ಯ ಅಧಿಕಾರಿ ಪಾಲಾಕ್ಷರವರು ಜನರ ಆರೋಗ್ಯ ಸುಧಾರಣೆಯ ಬಗ್ಗೆ ಮಾಹಿತಿ ನೀಡಿದರು.
ಬಳಿಕ ಹಸಿರು ಗ್ರಾಮ ನಿರ್ಮಾಣದಲ್ಲಿ ಯುವ ಜನರ ಪಾತ್ರದ ಕುರಿತು ನಿವೃತ್ತ ಪ್ರಾಂಶುಪಾಲ ಕೆ.ಆರ್. ಗಂಗಾಧರ್ ರವರು ಮತ್ತು ಗ್ರಾಮಗಳ ಸ್ವಚ್ಛತೆ ಕುರಿತು ಅರಂತೋಡು ಪಂಚಾಯತ್ ಪಿಡಿಒ ಜಯಪ್ರಕಾಶ್‌ರವರು ಉಪನ್ಯಾಸ ನೀಡಿದರು. ಬಳಿಕ ತ್ಯಾಜ್ಯ ವಿಲೇವಾರಿ ಬಗ್ಗೆ ಪ್ರಾತ್ಯಕ್ಷಿಕೆ ನೀಡಲಾಯಿತು.
ವೇದಿಕೆಯಲ್ಲಿ ಸೊಸೈಟಿ ಅಧ್ಯಕ್ಷ ಎನ್.ಸಿ.ಅನಂತ ಊರುಬೈಲು, ಗ್ರಾ.ಪಂ.ಸದಸ್ಯ ಆದಂ ಸಂಟ್ಯಾರು ಉಪಸ್ಥಿತರಿದ್ದರು. ಸಭೆಯಲ್ಲಿ ಸೊಸೈಟಿ ನಿರ್ದೇಶಕರಾದ ರಾಮಮೂರ್ತಿ ಉಂಬಳೆ, ಕೆ.ಸಿ.ವಸಂತ, ಸಿಇಒ ಆನಂದ ಬಿ.ಕೆ., ಅರೆಭಾಷೆ ಅಕಾಡೆಮಿ ಸದಸ್ಯ ಕಿರಣ್ ಕುಂಬಳಚೇರಿ, ಮಾಜಿ ಗ್ರಾ.ಪಂ.ಸದಸ್ಯರಾದ ಶ್ರೀನಿವಾಸ ನಿಡಿಂಜಿ, ಬಿ.ಸಿ.ರೇಖಾ, ಉಪನ್ಯಾಸಕ ಚಿದಾನಂದ ನಿಡಿಂಜಿ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.
ಲೋಕೇಶ್ ಊರುಬೈಲು ಕಾರ್ಯಕ್ರಮ ನಿರೂಪಿಸಿ, ಸಂಘದ ಕಾರ್ಯದರ್ಶಿ ಎಕ್ಯಡ್ಕ ಶಶಿಧರ ವಂದಿಸಿದರು.
ಭೋಜನದ ಬಳಿಕ ಬಾಲೆಂಬಿ ಮುಖ್ಯರಸ್ತೆಯಲ್ಲಿ ಸ್ವಚ್ಛತಾ ಅಭಿಯಾನ ಕೈಗೊಳ್ಳಲಾಯಿತು. ಕಾರ್ಯಕ್ರಮದ ಯಶಸ್ಸಿಗೆ ಪೆರಾಜೆಯ ಚಿಗುರು ಯುವಕ ಮಂಡಲ ಮತ್ತು ಯುವಕೋಟೆ ಯುವಕ ಮಂಡಲಗಳು ಸಹಕಾರ ನೀಡಿದವು.

 

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.